ಮಂಗಳವಾರ, ಮಾರ್ಚ್ 21, 2023
28 °C

ಸಿಗದ ಸೇವಾ ಪುಸ್ತಕ: ಪಿಡಬ್ಲ್ಯುಡಿ ವ್ಯವಸ್ಥಾಪಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ತಾಲ್ಲೂಕಿನ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ವಿಭಾಗ ಕಚೇರಿಯ ವ್ಯವಸ್ಥಾಪಕ 
ಲಕ್ಷ್ಮೀನರಸಿಂಹಯ್ಯ (56) ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಚೇರಿಯಲ್ಲಿನ ಇಬ್ಬರು ಅಧಿಕಾರಿಗಳ ಸೇವಾ ಪುಸ್ತಕ (ಸರ್ವೀಸ್ ರಿಜಿಸ್ಟರ್) ಕಳೆದು ಹೋಗಿತ್ತು. ಹುಡುಕಾಟ ನಡೆಸಿದರೂ ಸಿಕ್ಕಿಲ್ಲವೆಂದು ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಚೇರಿ ಮೇಲಧಿಕಾರಿ ತಿಳಿಸಿದ್ದಾರೆ.

ಗುರುವಾರ ರಾತ್ರಿ ಶಿವಗಂಗೆ ಪ್ರವಾಸಿ ಮಂದಿರಕ್ಕೆ ತೆರಳಿದ್ದ ಲಕ್ಷ್ಮೀನರಸಿಂಹಯ್ಯ ಶುಕ್ರವಾರ ಮುಂಜಾನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು