ಗುಣಮಟ್ಟದ ಶಿಕ್ಷಣ ಅವಶ್ಯಕ

7
ಸ್ವಾಗತ ಸಮಾರಂಭದಲ್ಲಿ ಕನ್ನಿಕಾ ಪರಮೇಶ್ವರ ಹೇಳಿಕೆ

ಗುಣಮಟ್ಟದ ಶಿಕ್ಷಣ ಅವಶ್ಯಕ

Published:
Updated:
Deccan Herald

ತುಮಕೂರು: ಮಕ್ಕಳು ಉತ್ತಮ ಆಲೋಚನೆಗಳನ್ನು ರೂಢಿಸಿಕೊಂಡು ತಮಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಮುಂದೆ ನಡೆದರೆ ಯಶಸ್ಸು ಸಾಧಿಸಬಹುದು ಎಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಅಡಳಿತ ಮಂಡಳಿಯ ಸದಸ್ಯೆ ಕನ್ನಿಕಾ ಪರಮೇಶ್ವರ ಸಲಹೆ ನೀಡಿದರು.

ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದ್ದು, ಇದರಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಹಾಗೇ ತಾಳ್ಮೆ, ಶಿಸ್ತು, ಶ್ರದ್ದೇ ಭಕ್ತಿಯನ್ನು ಮೈಗೂಢಿಸಿಕೊಳ್ಳಬೇಕು ಎಂದರು.

ಆಧುನಿಕ ಭರಾಟೆಯಲ್ಲಿ ಪೋಷಕರು ಮಕ್ಕಳ ಮೇಲೆ ಹೆಚ್ಚು ಒತ್ತಡ ಹಾಕುವುದರಿಂದ ಅವರು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಹಾಗಾಗಿ ಅವರನ್ನು ಪ್ರೀತಿಯಿಂದ ಹೇಳುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಲ ಡಾ.ಎಂ.ಕೆ ವೀರಯ್ಯ ಮಾತನಾಡಿ, ಗುರುವಿನ ಗುಲಾಮನಾಗುವ ತನಕ ಸಿಗುವುದಿಲ್ಲ ಮುಕುತಿ ಎನ್ನುವ ಮಾತಿನಂತೆ, ನಮ್ಮ ಜವಬ್ದಾರಿಗಳನ್ನು ಅರಿತು ನೂತನ ತಂತ್ರಜ್ಞಾನದೊಂದಿಗೆ ಬೌದ್ಧಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಗುರುಗಳೊಂದಿಗೆಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದರ ಜತೆಗೆ ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಎಂ.ಝಡ್. ಕುರಿಯನ್‌ ಮಾತನಾಡಿ, ನಿಮ್ಮ ಹವ್ಯಾಸ ಹಾಗೂ ಆಲೋಚನೆಗಳು ನಿಮ್ಮ ಜೀವನಕ್ಕೆ ದಾರಿ ದೀಪವಾಗುತ್ತವೆ. ಈ ನಾಲ್ಕು ವರ್ಷದಲ್ಲಿ ನೀವು ನಿಮ್ಮ ಕಟ್ಟುಪಾಡುಗಳನ್ನು ಕಟ್ಟಿಟ್ಟು ಪರಿಶ್ರಮದಿಂದ ಕಾರ್ಯಪ್ರವೃತ್ತರಾದರೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ ಎಂದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !