ತುರುವೇಕೆರೆ: ಜಿಲ್ಲೆಯಾದ್ಯಂತ ನಿತ್ಯ ₹8 ಲಕ್ಷ ಲೀಟರ್ಗೂ ಅಧಿಕ ಹಾಲನ್ನು ರೈತರು ಡೇರಿಗಳಿಗೆ ಮಾರಾಟ ಮಾಡುತ್ತಿದ್ದು, ಅವರಿಗೆ ತಿಂಗಳಿಗೆ ₹8 ಕೋಟಿ ಹಣ ಪಾವತಿಸಲಾಗುತ್ತಿದೆ ಎಂದು ಜಿಲ್ಲಾ ತುಮುಲ್ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ತಿಳಿಸಿದರು.

ಪಟ್ಟಣದ ವಿರಕ್ತ ಮಠದಲ್ಲಿ ನಡೆದ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಡೇರಿ, ಕ್ಯಾಲೆಂಡರ್ ವಿತರಣೆ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ಜಿಲ್ಲಾ ತುಮುಲ್ಗೆ ಗುಣಮಟ್ಟದ ಹಾಲನ್ನು ಹಾಕುವುದರಲ್ಲಿ ತುರುವೇಕೆರೆ ತಾಲ್ಲೂಕು ಪ್ರಥಮ ಸ್ಥಾನ ಪಡೆದಿದೆ. ಆ ಮೂಲಕ ಇತರೆ ತಾಲ್ಲೂಕುಗಳಿಗೂ ಮಾದರಿಯಾಗಿದೆ ಎಂದರು.

ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕಸುಬ್ರಾಯಭಟ್ ಮಾತನಾಡಿ, ‘ಹಾಲು ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ, ವಿದ್ಯಾರ್ಥಿಗಳ ಉನ್ನತ ವ್ಯಾಸಾಂಗಕ್ಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಜಿಲ್ಲಾ ಹಾಲು ಒಕ್ಕೂಟ ಆರ್ಥಿಕ ನೆರವು ನೀಡುತ್ತಾ ಬಂದಿದೆ’ ಎಂದರು.

ತಾಲ್ಲೂಕಿನ ಹಾಲು ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಹೊಸವರ್ಷದ ಕೊಡುಗೆಯಾಗಿ ಹಾಟ್ಬಾಕ್ಸ್, ಕ್ಯಾಲೆಂಡರ್, ತುಪ್ಪ, ಸಿಹಿ ಉತ್ಪನ್ನಗಳನ್ನು ನೀಡಲಾಯಿತು. 50ಕ್ಕೂ ಹೆಚ್ಚು ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹ ಧನ ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಸದಸ್ಯ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಬಿ.ಜಗದೀಶ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.