ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನಿಂದ ಬಂದವರ ಕ್ವಾರಂಟೈನ್

Last Updated 23 ಡಿಸೆಂಬರ್ 2020, 3:54 IST
ಅಕ್ಷರ ಗಾತ್ರ

ತುಮಕೂರು: ಬ್ರಿಟನ್‌ನಿಂದ ಜಿಲ್ಲೆಗೆ ಸೋಮವಾರ ರಾತ್ರಿ ಬಂದ ಐದು ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ತುಮಕೂರು ನಗರದ ನಾಲ್ಕು ಮತ್ತು ತಿಪಟೂರಿನ ಒಬ್ಬರು ಬ್ರಿಟನ್‌ನಿಂದ ಜಿಲ್ಲೆಗೆ ಬಂದಿದ್ದಾರೆ.

‘ದೇಶದಲ್ಲಿ ಹೊಸ ಸ್ವರೂಪದ ಕೊರೊನಾ ಸೋಂಕು ಪತ್ತೆಯಾಗಿದ್ದು ವೇಗವಾಗಿ ಹರಡುತ್ತಿದೆ. ಪರಿಸ್ಥಿತಿ ಕೈಮೀರಿದೆ’ ಎಂದು ಬ್ರಿಟನ್ ಸರ್ಕಾರ ಇತ್ತೀಚೆಗೆ ಹೇಳಿತ್ತು. ಈ ಪ್ರಯುಕ್ತ ಈ ಐದು ಮಂದಿಯ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಗಾ ಇಟ್ಟಿದೆ.

‘ಈಗಾಗಲೇ ಈ ಐದು ಮಂದಿಯ ಗಂಟಲು ಸ್ರಾವದ ಮಾದರಿಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೂ ವರದಿ ಬಂದಿಲ್ಲ. ಪಾಸಿಟಿವ್ ಬರಲಿ, ನೆಗೆಟಿವ್ ಬರಲಿ 14 ದಿನ ಇವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. ಅವರ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಗಮನವಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT