ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್ ಪಿನ್ ಶಿವಕುಮಾರ್ ಸಾವು

ಕೊರಟಗೆರೆ (ತುಮಕೂರು): ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್ನಿಂದ ಮಂಗಳವಾರ ಸಾವನ್ನಪ್ಪಿದ್ದಾರೆ.
ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು, ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು, ಪೊಲೀಸ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಸೋರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.