ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೆಲ್‌ ಹಗರಣ: ಬಿಜೆಪಿ ವಿರುದ್ದ ಪ್ರತಿಭಟನೆ

Last Updated 4 ಜನವರಿ 2019, 14:50 IST
ಅಕ್ಷರ ಗಾತ್ರ

ತುಮಕೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರವು ಯುದ್ದ ವಿಮಾನಗಳ (ರಫೆಲ್‌) ಖರೀದಿ ಹಗರಣದಲ್ಲಿ ಶಾಮೀಲಾಗಿದೆ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶರತ್‌ಕುಮಾರ್‌, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಇಲ್ಲಿಯವರೆವಿಗೂ ಹಲವಾರು ಹಗರಣಗಲ್ಲಿ ಭಾಗಿಯಾಗಿದ್ದು, ಪ್ರಮುಖವಾಗಿ ಅತಿದೊಡ್ಡ ಹಗರಣವಾದ ರಫೆಲ್‌ ಡೀಲ್ ಅತ್ಯಂತ ಆಘಾತಕಾರಿ ಸಂಗತಿಯಾಗಿದೆ ಎಂದು ಟೀಕಿಸಿದರು.

ಪ್ರಸ್ತುತ ಪೆಟ್ರೋಲ್ ಮತ್ತು ಡೀಸಲ್ ಹಾಗೂ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಹೆಚ್ಚಾಗುತ್ತಿದ್ದು, ಜಿಎಸ್‌ಟಿಯಿಂದ ಬಡವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೂಡಲೇ ಗ್ಯಾಸ್‌ ಬೆಲೆ ಇಳಿಸಬೇಕು. ಇಲ್ಲವಾದಲ್ಲಿ ಮತದಾರರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರ ಘಟಕದ ಅಧ್ಯಕ್ಷ ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಟಿ.ಪಿ.ಮೋಹನ್ ಕುಮಾರ್ ಹಾಗೂ ಜಿಲ್ಲಾ ಘಟಕದ ಉಪಾಧ್ಯಕ್ಷ ಇಲಾಯಿ ಸಿಖಂದರ್ ಮಾತನಾಡಿದರು.

ಕಾಂಗ್ರೆಸ್‌ ವಕ್ತಾರ ರಾಜೇಶ್ ದೊಡ್ಮನೆ, ಮಾಜಿ ಟೂಡಾ ಸದಸ್ಯ ಸುಜಾತ ಇದಾಯತ್, ಇಲಾಯಿ ಸಿಖಂದರ್, ಅಪ್ಜಲ್‌ಖಾನ್, ಜೈನ್, ವಾಸೀಮ್, ಮೆಹಬೂಬ್, ಹಸೀಬ್, ನಿಖಿಲ್ ಹಾಗೂ ಇರ್ಫಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT