ತುಮಕೂರು: ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ನಗರದ ಕುರಿಪಾಳ್ಯದಲ್ಲಿ ಮಂಗಳವಾರ ಹಳೆಯ ಮನೆಯೊಂದು ಕುಸಿದಿವೆ. ಕಳೆದ ವಾರ ಸುರಿದ ಮಳೆಗೆ ಎರಡು ಮನೆಗಳು ನೆಲಕ್ಕುರುಳಿದ್ದವು.

ಕುರಿಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಂಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಗಂಗಸಂದ್ರ ಸಮುದಾಯ ಭವನದ ಗಂಜಿ ಕೇಂದ್ರದಲ್ಲಿ ಈಗಾಗಲೇ 12 ಜನರಿಗೆ ಆಶ್ರಯ ನೀಡಲಾಗಿದೆ.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಂಗಳವಾರ ರಾತ್ರಿ ಕುರಿಪಾಳ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಂಜಿ ಕೇಂದ್ರದಲ್ಲಿ ಗುಣಮಟ್ಟದ ಆಹಾರ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಕುರಿಪಾಳ್ಯದಲ್ಲಿ ಪೌರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸುಮಾರು 50 ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಶಿಥಿಲಾವಸ್ಥೆಯ ಮನೆಗಳ ಸಮೀಕ್ಷೆ ನಡೆಸಬೇಕು’ ಎಂದರು.

ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ತಹಶೀಲ್ದಾರ್ ರಾಜೇಶ್ವರಿ, ಪಾಲಿಕೆ ಎಂಜಿನಿಯರ್ ವಿನಯ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.