ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ಧರೆಗುರುಳಿದ ಮರ, ವಿದ್ಯುತ್ ಕಂಬಗಳು

Published 21 ಮೇ 2023, 14:41 IST
Last Updated 21 ಮೇ 2023, 14:41 IST
ಅಕ್ಷರ ಗಾತ್ರ

ತಿಪಟೂರು: ತಾಲ್ಲೂಕಿನ ವಿವಿಧೆಡೆ ಭಾನುವಾರ ಸಂಜೆ ಮಳೆ-ಗಾಳಿಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ನೊಣವಿನಕೆರೆ ಬಳಿ ಹಾಲಿನ ಟ್ಯಾಂಕರ್ ಮೇಲೆ ಮರ ಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು‌. ಸುಮಾರು 1 ಗಂಟೆಗೂ ಅಧಿಕ ಕಾಲ ತಿಪಟೂರು-ತುರುವೇಕೆರೆ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ನೊಣವಿನಕೆರೆ, ವಿಜ್ಞಸಂತೆ ಸೇರಿದಂತೆ ಹಲವು ಕಡೆಗಳಲ್ಲಿ 8 ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿವೆ‌. ಈ ಭಾಗದಲ್ಲಿನ ಗ್ರಾಮಗಳ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT