ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಸತತ 3 ಗಂಟೆ ಸುರಿದ ಮಳೆ

Published 24 ಜೂನ್ 2024, 6:55 IST
Last Updated 24 ಜೂನ್ 2024, 6:55 IST
ಅಕ್ಷರ ಗಾತ್ರ

ತುಮಕೂರು: ನಗರದ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ಉತ್ತಮ ಮಳೆ ಸುರಿಯಿತು.

ನಗರದಲ್ಲಿ ಸಂಜೆ 4.30ರ ವೇಳೆಗೆ ಶುರುವಾದ ಮಳೆ ರಾತ್ರಿ 7.30 ಗಂಟೆಯ ವರೆಗೆ ಬಿತ್ತು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಾರ್ವಜನಿಕರು ಸಂಕಷ್ಟ ಅನುಭವಿಸಿದರು. ಅಂತರಸನಹಳ್ಳಿ ಕೆಳ ಸೇತುವೆ, ಕುಣಿಗಲ್‌ ಕೆಳ ಸೇತುವೆ, ಶೆಟ್ಟಿಹಳ್ಳಿ ಸೇತುವೆ ಬಳಿ ನೀರು ನಿಂತು ರಸ್ತೆ ದಾಟಲು ವಾಹನ ಸವಾರರು ಪರದಾಡಿದರು. ಮಳೆಯಲ್ಲಿ ಕೊಡೆ ಹಿಡಿದು ಸಾಗಿದರು.

ತಾಲ್ಲೂಕಿನ ಲಿಂಗಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ಹತ್ತಿರ ಹತ್ತಾರು ವಾಹನಗಳು ನಿಂತಲ್ಲಿಯೇ ನಿಂತಿದ್ದವು. ಇದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಸವಾರರು ಮಳೆಯಲ್ಲಿಯೇ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ತುಮಕೂರು ಗ್ರಾಮಾಂತರ, ಕೋರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT