ಸೋಮವಾರ, ಮೇ 16, 2022
28 °C

ತುಮಕೂರು: ಸಿದ್ಧಗಂಗಾ ಶ್ರೀ ಆಶೀರ್ವಾದ ಪಡೆದ ರಾಜೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಆರ್. ರಾಜೇಂದ್ರ ಅವರು ನಗರದ ಸಿದ್ಧಗಂಗಾ ಮಠಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯ ದರ್ಶನ ಪಡೆದರು. ಬಳಿಕ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ವಿಧಾನ ಪರಿಷತ್ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವ ಸಮಯ ಸನ್ನಿಹಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಜೇಂದ್ರ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಚರ್ಚಿಸಿದರು.

ಮುಖಂಡರಾದ ಕಲ್ಲಹಳ್ಳಿ ದೇವರಾಜು, ಪಿ. ಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟ್ ಮಠ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.