ಮಂಗಳವಾರ, ಮಾರ್ಚ್ 21, 2023
31 °C

ಸಾಮೂಹಿಕ ಪ್ರಾರ್ಥನೆ; ಶಾಸಕರ ಬಂಧನಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ರಂಜಾನ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದಿರುವ ಕಾಂಗ್ರೆಸ್ ಶಾಸಕರಾದ ಸಿ.ಎಂ.ಇಬ್ರಾಹಿಂ, ಜಮೀರ್ ಅಹಮದ್, ಹ್ಯಾರೀಸ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಒತ್ತಾಯಿಸಿದರು.

‘ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ದೇಶ ವಿಭಜನೆಗೆ ಮುಂದಾಗಿದ್ದಾರೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆ ಆಯಿತು. ಆಗಿನ ಸಂದರ್ಭ ಮತ್ತೆ ಈಗ ಆಗಲಿ ಎಂದು ಇವರು ಬಯಸುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಆರೋಪಿಸಿದರು.

ದೇಶ ವಿಭಜನೆ ಸಂದರ್ಭದಲ್ಲಿ ಭಾರತದಲ್ಲಿ 3 ಕೋಟಿ ಮುಸ್ಲಿಮರು ಇದ್ದರು. ಇಷ್ಟು ವರ್ಷಗಳಿಂದ ಅವರನ್ನು ಸೌಹಾರ್ದಯುತವಾಗಿ ನಡೆಸಿಕೊಂಡು ಬಂದಿದ್ದೇವೆ. ಆದರೆ ದೇಶ ವಿಭಜನೆಯ ಸಂದರ್ಭದಲ್ಲಿ ಪಾಕಿಸ್ತಾನ, ಬಾಂಗ್ಲಾದೇಶದಲ್ಲಿದ್ದ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಅವರನ್ನು ಮತಾಂತರ ಮಾಡಲಾಗುತ್ತಿದೆ ಎಂದು ಹೇಳಿದರು.

ಕೊರೊನಾ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲದು ಎಂದು ಕಿಡಿಕಾರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು