ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಅತ್ಯಾಚಾರ ಅಪರಾಧಿಗೆ 10 ವರ್ಷ ಸಜೆ

Published 20 ಏಪ್ರಿಲ್ 2024, 5:35 IST
Last Updated 20 ಏಪ್ರಿಲ್ 2024, 5:35 IST
ಅಕ್ಷರ ಗಾತ್ರ

ತುಮಕೂರು: ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ತಿಪಟೂರಿನ ಸೈಯದ್‌ಗೌಸ್‌ (40) ಎಂಬಾತನಿಗೆ ಪೋಕ್ಸೊ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ, ₹2 ಲಕ್ಷ ದಂಡ ವಿಧಿಸಿದೆ.

ಬಾಲಕಿಯನ್ನು ಪರಿಚಯ ಮಾಡಿಕೊಂಡ ಸೈಯದ್‌, ಆಕೆಯನ್ನು 2017ರ ಮೇ 6ರಂದು ರಾಜಸ್ಥಾನದ ಅಜ್ಮೀರ್‌ಗೆ ಕರೆದುಕೊಂಡು ಹೋಗಿದ್ದರು. ಮೇ 26ರ ವರೆಗೆ ಬಾಲಕಿಯನ್ನು ಅಕ್ರಮವಾಗಿ ಇರಿಸಿಕೊಂಡಿದ್ದರು. ಬಲವಂತವಾಗಿ ದೌರ್ಜನ್ಯವೆಸಗಿದ್ದರು. ಈ ಕುರಿತು ತಿಪಟೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಎಂ.ದೀಪಕ್‌ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣದ ಕುರಿತು ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹2 ಲಕ್ಷ ಸೇರಿದಂತೆ ಒಟ್ಟು ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಎಸ್‌.ಆಶಾ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT