ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಬಾಲಕಿ ಮೇಲೆ ಅತ್ಯಾಚಾರ

Published 6 ಮಾರ್ಚ್ 2024, 6:52 IST
Last Updated 6 ಮಾರ್ಚ್ 2024, 6:52 IST
ಅಕ್ಷರ ಗಾತ್ರ

ತುಮಕೂರು: ನಗರದ ಸಿದ್ಧಗಂಗಾ ಮಠದ ಸಮೀಪ ಇರುವ ಬಂಡೆಪಾಳ್ಯದ ಬಳಿ ಸೋಮವಾರ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಸ್ನೇಹಿತನ ಜತೆಗೆ ಸಿದ್ಧಗಂಗಾ ಮಠದ ಜಾತ್ರೆಗೆ ಹೋಗುತ್ತಿದ್ದರು. ಈ ವೇಳೆ ದಣಿದು ದಾರಿ ಮಧ್ಯದ ಮರದ ಕೆಳಗಡೆ ಕುಳಿತಿದ್ದರು. ಆರೋಪಿಗಳು ಇದನ್ನು ವಿಡಿಯೊ ಮಾಡಿಕೊಂಡು, ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಬಾಲಕಿಯನ್ನು ಬೈಕ್‌ನಲ್ಲಿ ಮನೆಗೆ ಕರೆದುಕೊಂಡು ಹೋಗಿ ಇಬ್ಬರು ಅತ್ಯಾಚಾರ ವೆಸಗಿದ್ದಾರೆ.

ಅತ್ಯಾಚಾರ ವೆಸಗಿದ ನಂತರ ಬಾಲಕಿಯನ್ನು ಮತ್ತೆ ಮಠದ ಹತ್ತಿರ ಕರೆತಂದು ಬಿಟ್ಟು ಹೋಗಿದ್ದಾರೆ. ಬಾಲಕಿಯ ಸ್ನೇಹಿತ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾನೆ. ಪೊಲೀಸರು ಆಸ್ಪತ್ರೆಯಲ್ಲಿ ಬಾಲಕಿಯ ಹೇಳಿಕೆ ಪಡೆದು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT