ಗಂಗಾಧರೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ

ಸೋಮವಾರ, ಮೇ 20, 2019
28 °C
ಜಂಗಮಕೋಟೆ; ಮೆರವಣಿಗೆಯಲ್ಲಿ ಕಲಾ ತಂಡಗಳಿಂದ ವೈಭವದ ಕಾರ್ಯಕ್ರಮ

ಗಂಗಾಧರೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ

Published:
Updated:
Prajavani

ಶಿಡ್ಲಘಟ್ಟ: ತಾಲ್ಲೂಕಿನ ಜಂಗಮಕೋಟೆಯ ಗಂಗಾಧರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವನ್ನು ಗುರುವಾರ ವಿಜೃಂಭಣೆಯಿಂದ ನೆರವೇರಿತು.

ಉತ್ತರಾಯಣ ವಸಂತ ಋತು ಚೈತ್ರ ಮಾಸ ಕೃಷ್ಣಪಕ್ಷ ಸಪ್ತಮಿಯಂದು ಗಂಗಾಧರೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತದೆ. ತೇರಿನಲ್ಲಿ ಉತ್ಸವ ಮೂರ್ತಿಗಳನ್ನಿರಿಸಿ, ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು.

ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಬಂದಿದ್ದರು. ಗ್ರಾಮದಲ್ಲಿ ರಥ ಸಾಗಿದಾಗ ಸಾಕಷ್ಟು ಜನಜಂಗುಳಿ ಏರ್ಪಟ್ಟಿತ್ತು. ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪೂಜೆ ನಂತರ ಪ್ರಸಾದ ವಿತರಿಸಲಾಯಿತು.

ಭಕ್ತರಿಗೆ ಮಜ್ಜಿಗೆ, ಪಾನಕ ಹಾಗೂ ಹೆಸರುಬೇಳೆ ವಿತರಿಸಲಾಯಿತು. ಮೆರವಣಿಗೆಯಲ್ಲಿ ವೀರಗಾಸೆ, ಕರಡಿ ಮೇಳ ಹಾಗೂ ನಾಸಿಕ್ ಡೋಲ್ ವಿಶೇಷ ಆಕರ್ಷಣೆಯಾಗಿದ್ದವು. ಗಾರ್ಡಿ ಗೊಂಬೆ, ಕೀಲು ಕುದುರೆ ಮುಂತಾದ ಆಕರ್ಷಕ ಸ್ಥಳೀಯ ಕಲೆಯು ಕೂಡ ಮೆರವಣಿಗೆಯಲ್ಲಿದ್ದವು. ತಮಟೆ ವಾದನಕ್ಕೆ ಭಕ್ತರು ಹೆಜ್ಜೆಹಾಕುತ್ತಾ ಮತ್ತಷ್ಟು ಸೊಬಗು ತಂದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಜೆ.ಟಿ.ನಾಗರಾಜ, ವೆಂಕಟೇಶ್, ಅಭಿವೃದ್ಧಿ ಅಧಿಕಾರಿ ವಜ್ರೇಶ್ ಕುಮಾರ್ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು.

ದೇವಾಲಯದ ಆವರಣದಲ್ಲಿ ಹೋಮಕುಂಡವನ್ನು ಮಾಡಿ, ಲೋಕ ಕಲ್ಯಾಣಾರ್ಥ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಭಕ್ತರು ರಥಕ್ಕೆ ಬಾಳೆಹಣ್ಣಿಗೆ ದವನ ಸಿಕ್ಕಿಸಿ ರಥಕ್ಕೆ ಎಸೆಯುವುದರ ಮೂಲಕ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಪ್ರಾರ್ಥಿಸಿದರು. 

ಗಂಗಾಧರೇಶ್ವರಸ್ವಾಮಿ ಟ್ರಸ್ಟ್ ಸಂಚಾಲಕ ಮೆಡಿಕಲ್ ಮಂಜು ಮಾತನಾಡಿ, ‘ಧಾರ್ಮಿಕವಾದ ಕಾರ್ಯಕ್ರಮಗಳಿಂದ ಮಾತ್ರ ಜನರಿಗೆ ಶಾಂತಿ ದೊರೆಯಲು ಸಾಧ್ಯ. ಬಯಲು ಸೀಮೆಯ ಜನರು ತೀವ್ರವಾದ ಮಳೆಯ ಕೊರತೆ ಎದುರಿಸುತ್ತಿದ್ದಾರೆ. ಜನರಿಗೆ ಭಗವಂತ ಈ ವರ್ಷದಲ್ಲಿಯಾದರೂ ಉತ್ತಮವಾದ ಮಳೆ ಬೆಳೆಗಳನ್ನು ಕೊಟ್ಟು ಬಯಲು ಸೀಮೆಯ ಜನ, ಜಾನುವಾರುಗಳನ್ನು ಸುಭಿಕ್ಷವಾಗಿರಿಸಲಿ ಎಂದು ಪ್ರಾರ್ಥಿಸುತ್ತಿದ್ದೇವೆ’ ಎಂದು ಹೇಳಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !