ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲಿಷ್ಠ ಭಾರತ ನಿರ್ಮಾಣಕ್ಕೆ ಸಜ್ಜಾಗಿ

ಕೇಂದ್ರೀಯ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಡಾ.ಕೆ.ರಾಕೇಶ್‌ ಕುಮಾರ್‌ ಅಭಿಮತ
Last Updated 19 ಡಿಸೆಂಬರ್ 2018, 15:36 IST
ಅಕ್ಷರ ಗಾತ್ರ

ತುಮಕೂರು: ‘ರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರವು ಜಾರಿಗೊಳಿಸಿದ ಯೋಜನೆಗಳು ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿರಬೇಕು’ ಎಂದು ಜಿಲ್ಲಾಧಿಕಾರಿ ಹಾಗೂ ಕೇಂದ್ರೀಯ ವಿದ್ಯಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಕೆ.ರಾಕೇಶ್‌ ಕುಮಾರ್‌ ತಿಳಿಸಿದರು.

ನಗರದ ಬಾಲ ಭವನದಲ್ಲಿ ಬುಧವಾರ ನಡೆದ ಕೇಂದ್ರೀಯ ವಿದ್ಯಾಲಯದ 21ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ ಯೋಜನೆಗಳನ್ನು ಸರಿಯಾದ ರೀತಿ ಬಳಸಿಕೊಳ್ಳಬೇಕು. ಪ್ರಪಂಚದಲ್ಲಿಯೇ ಶೇ 60 ರಷ್ಟು ಯುವಜನರು ಇರುವ ದೇಶ ಭಾರತ. ಹಾಗಾಗಿ ಇದನ್ನು ಅತ್ಯಂತ ಬಲಿಷ್ಠ ರಾಷ್ಟ್ರವನ್ನಾಗಿ ನಿರ್ಮಾಣ ಮಾಡುವಲ್ಲಿ ಯುವಜನರು ಸಜ್ಜುಗೊಳ್ಳಬೇಕು ಎಂದರು.

‘ಇಂದು ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಶ್ರೇಯೋಭಿವೃದ್ಧಿಗೆ ಪೋಷಕರು ಮತ್ತು ಶಿಕ್ಷಕರು ಶ್ರಮಿಸಬೇಕು. ವೈಯಕ್ತಿಕ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸದೆ ರಾಷ್ಟ್ರದ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ’ ಎಂದು ಆಶಿಸಿದರು.

‘ರೈತರು, ಸೈನಿಕರು ದೇಶಕ್ಕಾಗಿ ಕೊಡುಗೆ ನೀಡುತ್ತಿದ್ದಾರೆ. ಅದರಂತೆಯೇ ಎಲ್ಲರೂ ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ರಾಯ್‌ಮಲ್ಲು ಸೋಕಲ್ ಇದ್ದರು. ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಒಟ್ಟು 48 ಭಿನ್ನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ನೀಡಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT