ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೈ’ ಮುಖಂಡರ ಬಂಡಾಯ

ಪಾವಗಡ: ಶಾಸಕರ ಪುತ್ರನಿಗೆ ಟಿಕೆಟ್‌ ಘೋಷಣೆಗೆ ಆಕ್ಷೇಪ
Last Updated 28 ಮಾರ್ಚ್ 2023, 5:42 IST
ಅಕ್ಷರ ಗಾತ್ರ

ಪಾವಗಡ: ಪಟ್ಟಣದಲ್ಲಿ ಸೋಮವಾರ ಮಾಜಿ ಶಾಸಕ ಸೋಮ್ಲಾನಾಯ್ಕ ನೇತೃತ್ವದಲ್ಲಿ ಕಾಂಗ್ರೆಸ್ ಬಂಡಾಯ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಿತು.

ವಿಧಾನಸಭೆ ಚುನಾವಣೆಯ ಟಿಕೆಟ್‌ ಆಕಾಂಕ್ಷಿಯಾಗಿ ಗಾಯಿತ್ರಿ ಬಾಯಿ ಅರ್ಜಿ ಸಲ್ಲಿಸಿದ್ದರು. ಶಾಸಕ ವೆಂಕಟರಮಣಪ್ಪ ಅವರ ಪುತ್ರ ಎಚ್.ವಿ. ವೆಂಕಟೇಶ್ ಅವರ ಹೆಸರನ್ನು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಹಿನ್ನೆಲೆ ಪಟ್ಟಣದಲ್ಲಿ ಮಾಜಿ ಶಾಸಕ ಸೋಮ್ಲಾನಾಯ್ಕ, ಗಾಯಿತ್ರಿ ಬಾಯಿ ಸೇರಿದಂತೆ ಬಂಡಾಯ ಮುಖಂಡರು, ಕಾರ್ಯಕರ್ತರ ಸಭೆ ನಡೆಸಲಾಗಿದೆ.

‘ಕಾರ್ಯಕರ್ತರು, ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಭಾನುವಾರ ಮತ್ತೊಂದು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮಾಜಿ ಶಾಸಕ ಸೋಮ್ಲಾನಾಯ್ಕ ಸಭೆಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗಾಯಿತ್ರಿ ಬಾಯಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕೆ, ಇತರೆ ಪಕ್ಷದಿಂದ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆ, ಎಂಬುದನ್ನು ಮತ್ತೊಂದು ಸಭೆಯಲ್ಲಿ ತೀರ್ಮಾನಿಸಲಾಗುವುದು. ಕಾರ್ಯಕರ್ತರು, ಪ್ರಮುಖರ ಸಲಹೆ ಸೂಚನೆಯಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಕೂಡಲೇ ತಾಲ್ಲೂಕಿನಾದ್ಯಂತ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಒಂದೆಡೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ತಾಲ್ಲೂಕಿನಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಬಂಡಾಯ ಮುಖಂಡರು ಸಭೆಗಳನ್ನು ನಡೆಸಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT