ತುಮಕೂರು: ನಗದ ವಿವಿಧೆಡೆ ಸರ್ಕಾರದ ಯೋಜನೆಗಳನ್ನು ತಿಳಿಸುವ ಸಲುವಾಗಿ ಅಂಟಿಸಿದ್ದ ಪೋಸ್ಟರ್‌ಗಳಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಕೆಂಪು ಹಣ್ಣ ಬಳಿದಿದ್ದಾರೆ.
ಪೋಸ್ಟರ್‌ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭಾವಚಿತ್ರಗಳಿಗೆ ಕೆಂಪು ಬಣ್ಣ ಹಚ್ಚಲಾಗಿದೆ.
ನಗರದ ಕೃಷಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಮುಂಭಾಗ ಹಾಗೂ ಅಕ್ಕಪಕ್ಕದ ಕಾಂಪೌಂಡ್‍ಗಳ ಮೇಲೆ ಸರ್ಕಾರದ ವಿವೇಕ ಯೋಜನೆ, ರೈತ ವಿದ್ಯಾನಿಧಿ, ಕಟ್ಟಡ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಪೋಸ್ಟರ್ ಅಂಟಿಸಲಾಗಿತ್ತು. ಅದರಲ್ಲಿನ ಮಾಹಿತಿಯನ್ನು ಹಾಗೆ ಬಿಟ್ಟು, ನಾಯಕರು ಭಾವಚಿತ್ರಗಳು ಕಾಣಿಸದಂತೆ ಬಣ್ಣ ಬಳಿಯಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.