ಮಧುಗಿರಿ: ತಾಲ್ಲೂಕು ರೆಡ್ಡಿ ಜನ ಸಂಘದಿಂದ ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಗುವುದು ಎಂದು ತಾಲ್ಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ.ಎಸ್. ಪಾಂಡುರಂಗರೆಡ್ಡಿ ತಿಳಿಸಿದರು.

ಪಟ್ಟಣದ ವೇಮನ ರೆಡ್ಡಿ ಸಮಯದಾಯ ಭವನದಲ್ಲಿ ತಾಲ್ಲೂಕು ರೆಡ್ಡಿ ಜನ ಸಂಘದಿಂದ ಗುರುವಾರ ನಡೆದ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ರೆಡ್ಡಿ ಜನಸಂಘ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ. ಮುಂದಿನ ದಿನಗಳಲ್ಲಿ ರೆಡ್ಡಿ ಜನ ಸಂಘದ ವಿದ್ಯಾರ್ಥಿ ನಿಲಯ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳಿಸುವ ಉದ್ದೇಶವಿದೆ ಎಂದು ಹೇಳಿದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣಾರೆಡ್ಡಿ ಮಾತನಾಡಿ, ರೆಡ್ಡಿ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಿದ್ದು, ತಾಲ್ಲೂಕಿಗೆ ಗೌರವ ತಂದಿದ್ದಾರೆ. ವಿದ್ಯಾರ್ಥಿಗಳು ಗುರಿ ಸಾಧಿಸಲು ಸಂಘ ಸದಾ ನಿಮ್ಮ ಹಿಂದೆ ಇರುತ್ತದೆ ಎಂದು ಭರವಸೆ ನೀಡಿದರು.

ಸಾಹಿತಿ ಮ.ಲ.ನ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಹಿಂದೆ ಪೋಷಕರ ಪಾತ್ರ ಮಹತ್ತರವಾದದು. ವಿದ್ಯಾರ್ಥಿಗಳು ಶಿಕ್ಷಕರ ಮತ್ತು ಪೋಷಕರ ಋಣ ತೀರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಯಶ್ವಿತಾ ರೆಡ್ಡಿ, ಪಿ.ಎನ್.ತರುಣ್, ತೇಜಸ್ವಿನಿ, ಗಿರೀಶ್ ಮಂಥರೆಡ್ಡಿ, ಜಸ್ವಂತ್ ರೆಡ್ಡಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಗಗನ್ ಸಾಗರ ರೆಡ್ಡಿ, ಗಾನವಿ ಅವರನ್ನು ಸತ್ಕರಿಸಲಾಯಿತು.

ತಾಲ್ಲೂಕು ರೆಡ್ಡಿ ಜನ ಸಂಘದ ಪದಾಧಿಕಾರಿಗಳಾದ ಲೋಕೋಪಯೋಗಿ ಇಲಾಖೆಯ ನಿವೃತ್ತ ಇಇ ಸುರೇಶ್ ರೆಡ್ಡಿ, ವೆಂಕಟಕೃಷ್ಣಾ ರೆಡ್ಡಿ, ಮೋಹನ್ ಕುಮಾರ್ ರೆಡ್ಡಿ ಅಶ್ವತ ನಾರಾಯಣ ರೆಡ್ಡಿ, ಶ್ರೀನಿವಾಸ ರೆಡ್ಡಿ, ಶನಿವಾರಂರೆಡ್ಡಿ, ತಿಮ್ಮಾರೆಡ್ಡಿ, ಹನುಮಂತರೆಡ್ಡಿ , ಶೈಲಜಾ ಭಾಸ್ಕರರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮೀಳಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.