ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ರಕ್ತದಾನ, ನೇತ್ರದಾನಕ್ಕೆ ನೋಂದಣಿ

ಅಪ್ಪು ಅಭಿಮಾನಿಗಳಿಂದ ರಕ್ತದಾನ
Last Updated 14 ನವೆಂಬರ್ 2021, 8:30 IST
ಅಕ್ಷರ ಗಾತ್ರ

ತಿಪಟೂರು: ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಅಭಿಮಾನಿಗಳು 42 ಯುನಿಟ್ ರಕ್ತ ಹಾಗೂ 50ಕ್ಕೂ ಹೆಚ್ಚು ಮಂದಿನೇತ್ರದಾನಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ.

ಪುನೀತ್ ಪುಣ್ಯಸ್ಮರಣೆ ಅಂಗವಾಗಿ ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಆಲ್ಬೂರು ಹಾಗೂ ಅಣಪನಹಳ್ಳಿ ಗ್ರಾಮಸ್ಥರು ಇತ್ತೀಚೆಗೆ ರಕ್ತದಾನಹಾಗೂ ನೇತ್ರದಾನ ನೋಂದಣಿ ಶಿಬಿರ ಆಯೋಜಿಸಿದ್ದರು.

ತುಮಕೂರಿನ ಜಿಲ್ಲಾ ಆಸ್ಪತ್ರೆಯ ರಕ್ತ ಸಂಗ್ರಹ ನಿಧಿಯ ಡಾ.ಪ್ರದೀಪ್ ಮಾತನಾಡಿ, ‘ಕೊರೊನಾ ನಂತರದ ದಿನಗಳಲ್ಲಿ ರಕ್ತದಾನಿಗಳ ಸಂಖ್ಯೆ ಕ್ಷೀಣಿಸಿದೆ. ಇದರಿಂದ ಅತ್ಯಂತ ಅಗತ್ಯದ ಸಂದರ್ಭದಲ್ಲಿ ಕೆಲವೊಮ್ಮೆ ರಕ್ತ ದೊರೆಯದಂತಹ ಸನ್ನಿವೇಶಗಳನ್ನು ಎದುರಿಸಿದ್ದೇವೆ. ರಕ್ತದಾನ ಮಾಡುವುದರಿಂದ ದೇಹಕ್ಕೂ ಅನುಕೂಲವಾಗುವ ಜೊತೆಗೆ ಉತ್ತಮ ಆರೋಗ್ಯದ ವೃದ್ಧಿಗೂ ಸಹಕಾರಿಯಾಗಲಿದೆ. ಜೊತೆಗೆ ತ್ವರಿತವಾಗಿ ರಕ್ತವೂ ಉತ್ಪತ್ತಿಯಾಗುತ್ತದೆ’ ಎಂದರು.

‘ಒಬ್ಬರು ರಕ್ತ ನೀಡುವುದರಿಂದ ನಾಲ್ಕು ಜೀವ ಕಾಪಾಡುವಂತಹ ಅವಕಾಶ ದೊರೆಯುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಾಗಲಿ’ ಎಂದು ಆಶಿಸಿದರು.

ನೊಣವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಚನ್ನಕೇಶವ, ಅಶೋಕ್, ರಮೇಶ್, ಸತೀಶ್, ಸ್ವಾಮಿ, ಕೆ. ಗಂಗಾಧರ್, ಚಂದ್ರಶೇಖರ್ ಸೇರಿದಂತೆ ನೂರಾರು ಅಭಿಮಾನಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT