ತುಮಕೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಸರಿಯಾಗಿ ಅನುದಾನ ನೀಡುತ್ತಿರಲಿಲ್ಲ. ಪ್ರಸ್ತುತ ಸರ್ಕಾರ ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ₹10 ಕೋಟಿಯಿಂದ ₹15 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಶುಕ್ರವಾರ ಹೇಳಿದರು.

ಕಳೆದ ಸರ್ಕಾರದಲ್ಲಿ ಬಿಜೆಪಿ ಶಾಸಕರ ಕ್ಷೇತ್ರಕ್ಕೆ ₹50 ಕೋಟಿ ಕೊಟ್ಟರೆ, ಕಾಂಗ್ರೆಸ್ನವರಿಗೆ ₹10 ಕೋಟಿ ನೀಡುತ್ತಿದ್ದರು. ಈಗ ರಾಜ್ಯದ ಎಲ್ಲ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಾಗಲಿದೆ. ಇದರಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ. ಜಿಲ್ಲೆಗೆ ಭೇಟಿ ನೀಡುವ ಮುಖ್ಯಮಂತ್ರಿಗೆ ಕಪ್ಪು ಬಾವುಟ ತೋರಿಸಬಾರದು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

‘ಜಿಲ್ಲೆಯಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸುವ ಉದ್ದೇಶದಿಂದ ಎರಡು ಪೂರ್ವಭಾವಿ ಸಭೆಗಳನ್ನು ನಡೆಸಲಾಗಿತ್ತು. ನಂತರ ಸಚಿವ ಕೆ.ಎನ್.ರಾಜಣ್ಣ ಹಾಸನದಲ್ಲಿ ಸಮಾವೇಶ ಮಾಡುತ್ತೇವೆ ಎಂದರು. ಹೀಗಾಗಿ ಕಾರ್ಯಕ್ರಮದ ಸ್ಥಳ ಬದಲಾಗಿದೆ. ಸಿದ್ದರಾಮಯ್ಯ ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವು ಸದಾ ಅವರ ಜತೆ ಇರುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ದಾಬಸ್ಪೇಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಕನಕನಪುರ, ಬೆಂಗಳೂರು ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಚರ್ಚೆ ನಡೆಯುತ್ತಿದೆ. ಇನ್ನೂ ಜಾಗ ಅಂತಿಮವಾಗಿಲ್ಲ. ವಸಂತನರಸಾಪುರದಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದೆ. ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ತಿಳಿಸಿದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ಸರ್ಕಾರ ಐದು ಗ್ಯಾರಂಟಿಗೆ ಎಲ್ಲ ಹಣ ಬಳಸಿದ್ದು, ಅಭಿವೃದ್ಧಿಗೆ ಹಣ ಇಲ್ಲ. ಆಡಳಿತ ನಿಷ್ಕ್ರಿಯವಾಗಿದೆ ಎಂಬ ವಿರೋಧ ಪಕ್ಷದ ನಾಯಕರ ಆರೋಪಕ್ಕೆ ಈ ಕಾರ್ಯಕ್ರಮ ಉತ್ತರವಾಗಿದೆ. ಸಾವಿರಾರು ಕೋಟಿಯ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಹಾಜರಿದ್ದರು.

₹150 ಕೋಟಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ

ತಾಲ್ಲೂಕಿನ ಸೋರೆಕುಂಟೆ ಬಳಿ ₹150 ಕೋಟಿ ವೆಚ್ಚದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.2ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು. ಈಗಾಗಲೇ 41 ಎಕರೆ ಜಾಗವನ್ನು ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ (ಕೆಸಿಎ) ನೀಡಲಾಗಿದೆ. ಇದಕ್ಕಾಗಿ ₹6 ಕೋಟಿಗೂ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಈಗಾಗಲೇ ಒಂದಷ್ಟು ಹಣ ನೀಡಿದ್ದಾರೆ. ಮುಂದಿನ ಎರಡು ವರ್ಷದಲ್ಲಿ ಕ್ರೀಡಾಂಗಣ ತಲೆ ಎತ್ತಲಿದೆ ಎಂದರು. ₹938.03 ಕೋಟಿ ವೆಚ್ಚದ ಸುಮಾರು 825 ಕಾಮಗಾರಿಗೆ ಶಂಕುಸ್ಥಾಪನೆ ₹94.22 ಕೋಟಿ ವೆಚ್ಚದ 66 ನೂತನ ಕಾಮಗಾರಿ ಉದ್ಘಾಟನೆ ನೆರವೇರಿಸಲಾಗುತ್ತದೆ. ಸುಮಾರು 1.50 ಲಕ್ಷ ಫಲಾನುಭವಿಗಳಿಗೆ ₹226.96 ಕೋಟಿ ವೆಚ್ಚದ ಸವಲತ್ತು ಸಲಕರಣೆ ಮತ್ತು ಧನ ಸಹಾಯದ ಚೆಕ್ ವಿತರಿಸಲಾಗುತ್ತದೆ. ಸಂಜೀವಿನಿ ಯೋಜನೆಯಡಿ ₹40 ಕೋಟಿ ಹಣ ನೀಡುತ್ತಿದ್ದು ಇದರಿಂದ 40 ಸಾವಿರ ಮಹಿಳೆಯರಿಗೆ ಅನುಕೂಲವಾಗಲಿದೆ. 2 ಸಾವಿರ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.