ತುಮಕೂರು: ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದಲ್ಲಿ ಶನಿವಾರ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.

ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರ ಬದುಕಿನ ಹಾದಿಯನ್ನು ಮೆಲುಕು ಹಾಕಿದರು. ಅದ್ವೈತ-ವಿಶಿಷ್ಟಾದ್ವೈತ ಸಿದ್ಧಾಂತ ಸಾರಿದ ಕೀರ್ತಿ ರೇಣುಕಾಚಾರ್ಯರಿಗೆ ಸಲ್ಲುತ್ತದೆ ಎಂದು ಸ‌್ಮರಿಸಿದರು.

‘ವಿಶ್ವಕ್ಕೆ ವೀರಶೈವ ಧರ್ಮವನ್ನು ಪರಿಚಯಿಸುವ ಮುಖಾಂತರ ಮಾನವ ಧರ್ಮಕ್ಕೆ ಒಳಿತಾಗಲಿ ಎಂಬ ಸಿದ್ಧಾಂತ ಸಾರಿದ ಧೀಮಂತ ಶಕ್ತಿ ಜಗದ್ಗುರು ರೇಣುಕಾಚಾರ್ಯರು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಹೇಳಿದರು.

ಸಮುದಾಯದ ಮುಖಂಡ ಟಿ.ಆರ್.ಸದಾಶಿವಯ್ಯ, ‘ಇಡೀ ಮಾನವ ಕುಲಕ್ಕೆ ಒಳಿತಾಗಬೇಕು ಎಂಬ ಉದ್ದೇಶದಿಂದ ಎಲ್ಲ ಸಮುದಾಯದಲ್ಲೂ ಶಿವ ಜ್ಞಾನವನ್ನು ಬಿತ್ತಲು ಪ್ರಯತ್ನ ಪಟ್ಟ ರೇಣುಕಾಚಾರ್ಯರು, ವಿಶ್ವಮಾನವ ಶಾಂತಿಗೆ ಸದಾ ಶ್ರಮಿಸಿದವರು’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ರಾಜ್ಯ ಕಲಾವಿದರ ಒಕ್ಕೂಟದ ಅಧ್ಯಕ್ಷ ರಾ.ವೀರೇಶ್ ಪ್ರಸಾದ್, ಸಮುದಾಯದ ಮುಖಂಡರಾದ ರುದ್ರೇಶ್ ಶಾಸ್ತ್ರಿ ತೆವಡೆಹಳ್ಳಿ, ವೀರಣ್ಣ, ಅನುಸೂಯಮ್ಮ, ಕನ್ನಡ ಪ್ರಕಾಶ್, ಡಿ.ದಾನೇಶ್ವರಿ, ಕೋಮಲ ವೀರಭದ್ರಯ್ಯ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.