ಶ್ರೀಗಳ 111 ಅಡಿ ಪ್ರತಿಮೆ ಸ್ಥಾಪನೆಗೆ ಮನವಿ

7

ಶ್ರೀಗಳ 111 ಅಡಿ ಪ್ರತಿಮೆ ಸ್ಥಾಪನೆಗೆ ಮನವಿ

Published:
Updated:

ತುಮಕೂರು: ಎಂಟು ದಶಕಗಳಿಂದ ತ್ರಿವಿಧ ದಾಸೋಹದಲ್ಲಿ ನಿರತರಾಗಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾಗಿರುವ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ 111 ಅಡಿ ಎತ್ತರದ ಪ್ರತಿಮೆಯನ್ನು ನಗರದ ಅಮಾನಿಕೆರೆಯ ದ್ವೀಪದಲ್ಲಿ ಸ್ಥಾಪಿಸಬೇಕು ಎಂದು ಅಮಾನಿಕೆರೆ ಮುಂಜಾನೆ ಗೆಳೆಯರ ಬಳಗ ಮನವಿ ಮಾಡಿದೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ಕಾರ್ಯೋನ್ಮುಖರಾಗಬೇಕು ಎಂದು ಬಳಗದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಕೋರಲಾಗಿದೆ.

ನಿತ್ಯ ಹತ್ತು ಸಾವಿರ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ಶಿಕ್ಷಣ, ವಸತಿ ಸೌಲಭ್ಯ ಕಲ್ಪಿಸಿರುವುದಲ್ಲದೇ ಮಠಕ್ಕೆ ಬರುತ್ತಿರುವ  ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಮಾಡುವ ಮೂಲಕ ಸ್ವಾಮೀಜಿಯವರು ನಡೆದಾಡುವ ದೇವರೇ ಆಗಿಬಿಟ್ಟಿದ್ದಾರೆ. ಪ್ರತಿಮೆ ನಿರ್ಮಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !