ಶನಿವಾರ, ಅಕ್ಟೋಬರ್ 23, 2021
20 °C
ನಾಮ ನಿರ್ದೇಶಿತ ಸದಸ್ಯರಿಗೆ ಸನ್ಮಾನ

ಅರ್ಹರಿಗೆ ಸಾಗುವಳಿ ಚೀಟಿ ನೀಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಅರ್ಹರಿಗೆ ಸಾಗುವಳಿ ಚೀಟಿ ಕೊಡಿಸುವ ಮೂಲಕ ಉತ್ತಮ ಕೆಲಸ ಮಾಡಿ ಬಿಜೆಪಿಗೆ ಒಳ್ಳೆಯ ಹೆಸರು ತರಬೇಕೆಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಿ.ಎಲ್. ನರಸಿಂಹಮೂರ್ತಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಗರ್ ಹುಕುಂ ಸಮಿತಿಗೆ ಆಯ್ಕೆಯಾದ ಮೂವರು ನಾಮ ನಿರ್ದೇಶಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಾಮಾನ್ಯ ಕಾರ್ಯಕರ್ತರಿಗೂ ಅಧಿಕಾರ ನೀಡುವುದು ಬಿಜೆಪಿಯಲ್ಲಿ ಮಾತ್ರ. ಪಕ್ಷ ನೀಡಿದ ಅಧಿಕಾರವನ್ನು ಕಾರ್ಯಕರ್ತರು ಸದುಪಯೋಗಪಡಿಸಿಕೊಂಡು ಸಾರ್ವಜನಿಕರ ಪರವಾದ ಕೆಲಸ ಮಾಡಬೇಕೆಂದು
ತಿಳಿಸಿದರು.

ಬಗರ್ ಹುಕುಂ ಸಮಿತಿಯಲ್ಲಿ ಬಾಕಿ ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು
ತಿಳಿಸಿದರು.

ಇದೇ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿಗೆ ನಾಮ ನಿರ್ದೇಶನಗೊಂಡ ಪ್ರಸನ್ನಕುಮಾರ್, ನಾರಾಯಣಪ್ಪ, ಉಮಾದೇವಿ ಚೌಡಪ್ಪ ಅವರನ್ನು
ಸನ್ಮಾನಿಸಲಾಯಿತು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರಪ್ಪ, ಉಪಾಧ್ಯಕ್ಷೆ ಲಕ್ಷ್ಮೀಪ್ರಕಾಶ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮೀಪತಿ, ಕಾರ್ಯದರ್ಶಿ ಶಿವಕುಮಾರ್, ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷ ಪ್ರಕಾಶ್, ಅಲೆಮಾರಿ ಜನಾಂಗದ ಅಧ್ಯಕ್ಷ ಮಂಜುನಾಥ್, ಹೋಬಳಿ ಮಹಾಶಕ್ತಿ ಕೇಂದ್ರದ ಪ್ರಮುಖರಾದ ರಂಗನಾಥ್, ವೆಂಕಟೇಶ್, ಗಂಗಾಧರ್, ಶಿವಶಂಕರ್, ಶಾಂತಾರಾಧ್ಯ
ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.