ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ಸಂಚಾರ ಆರಂಭಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 18 ಸೆಪ್ಟೆಂಬರ್ 2021, 2:54 IST
ಅಕ್ಷರ ಗಾತ್ರ

ತುಮಕೂರು: ಶಾಲೆ, ಕಾಲೇಜುಗಳು ಆರಂಭವಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಬಸ್ ಸಂಚಾರ ಆರಂಭಿಸಬೇಕು, ಶಿಷ್ಯವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕೋವಿಡ್ ಕಾರಣಕ್ಕೆ ತರಗತಿಗಳ ಸಮಯವನ್ನು ಬದಲಿಸಿದ್ದು, ಸಕಾ
ಲಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶ
ದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಲಾಕ್‍ಡೌನ್‌ನಿಂದಾಗಿ ಸ್ಥಗಿತ
ಗೊಂಡಿದ್ದಕೆಎಸ್‌ಆರ್‌ಟಿಸಿ ಬಸ್ ಸಂಚಾರ ಕೆಲ ಹಳ್ಳಿಗಳಲ್ಲಿ ಇನ್ನೂ ಪುನ
ರಾರಂಭವಾಗಿಲ್ಲ. ದಿನಕ್ಕೆ ಒಂದೆರಡು ಬಸ್‍ಗಳು ಮಾತ್ರ ಸಂಚರಿಸುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಹಿಂದಿನಂತೆ ಮತ್ತೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ, ಪಿಎಚ್.ಡಿ ಮಾಡುತ್ತಿರುವ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೆ ಪರದಾಡುವಂತಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ರೀತಿಯ ವಿದ್ಯಾರ್ಥಿ ವೇತನವನ್ನು ಶೀಘ್ರ ಬಿಡುಗಡೆ ಮಾಡಬೇಕು. ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಸಾಕಷ್ಟು ವಿದ್ಯಾರ್ಥಿಗಳು ಹಾಸ್ಟೆಲ್ ಅವಲಂಬಿಸಿದ್ದಾರೆ. ಹಿಂದುಳಿದ ವರ್ಗ, ಸಮಾಜ ಕಲ್ಯಾಣ,ಅಲ್ಪ ಸಂಖ್ಯಾತ ಇಲಾಖೆಗಳ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಸಂಖ್ಯೆಗೂ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಗೂ ಸಾಕಷ್ಟು ಅಂತರವಿದೆ. ಹಾಸ್ಟೆಲ್ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಎಬಿವಿಪಿ ಪದಾಧಿಕಾರಿಗಳಾದ ಅಪ್ಪು ಪಾಟೀಲ್, ಪ್ರತಾಪ್, ಮಧ್ವೇಶ್, ಚೈತ್ರ, ಸಿದ್ಧಾರ್ಥ್, ಸುಷ್ಮ, ಲೋಕೇಶ್‌ ಭೀಮರಾಯ್, ರಂಜಿನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT