ಗುರುವಾರ , ಜನವರಿ 27, 2022
27 °C
ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ತಾಲ್ಲೂಕಿನ ದೊಡ್ಡಮಧುರೈ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ಮುಖಂಡರಾದ ಡಿ.ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಬಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಮುಖಂಡ ಅಲೋಕ, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುತ್ತಿರುವ ಜಾಗ ಸೂಕ್ತವಾಗಿಲ್ಲ. ಈ ಭಾಗದಲ್ಲಿ ಹೇಮಾವತಿ ನಾಲೆ, ಶಾಲೆ, ಶಿರಾ- ನಂಜನಗೂಡು ರಸ್ತೆ, ಜಾನುವಾರು ಬಳಕೆಯ ಕಟ್ಟೆ, ವಾಸದ ಮನೆ, ರೇಷ್ಮೆ ಇಲಾಖೆ ಇದೆ. ಈಗಾಗಲೇ ಹಲವರು ಮನವಿ ನೀಡಿದ್ದರೂ, ಪ್ರಯೋಜನವಾಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯೆ ಚೂಡಾಮಣಿ ವೆಂಕಟೇಶ್, ಲಕ್ಷ್ಮಣ, ಗ್ರಾಮಸ್ಥರಾದ ಗಿರೀಶ್, ರಾಜಣ್ಣ, ಪ್ರಕಾಶ್, ಚನ್ನೇಗೌಡ, ನಾಗಣ್ಣ, ಶಂಕರ್, ಮಾಯಣ್ಣ ಇದ್ದರು.

ಅಧ್ಯಕ್ಷ ಕೃಷ್ಣಮೂರ್ತಿ ಮತ್ತು ಪಿಡಿಒ ಹರೀಂದ್ರ ಗೋಪಾಲ್ ಅವರಿಗೆ ಮನವಿ ಸಲ್ಲಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.