ಮಂಗಳವಾರ, ಮೇ 18, 2021
30 °C

ತುಮಕೂರು: ಖಾಸಗಿ ಬಸ್ ನಿಲ್ದಾಣದ ಮಳಿಗೆಗಳ ಬಾಡಿಗೆ ಮನ್ನಾಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೊರೊನಾ ಸಂಕಷ್ಟ ಕಾಲದಲ್ಲಿ ಖಾಸಗಿ ಬಸ್ ನಿಲ್ದಾಣದ ಮಳಿಗೆಗಳಿಂದ ಮಹಾನಗರಪಾಲಿಕೆ ಬಾಡಿಗೆ ವಸೂಲಿ ಮಾಡಬಾರದು ಎಂದು ಒತ್ತಾಯಿಸಿ ನಿಲ್ದಾಣದ ವ್ಯಾಪಾರಿಗಳು ಸೋಮವಾರ ತಮ್ಮ ಅಂಗಡಿ ಮಳಿಗೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಕೋವಿಡ್–19 ಲಾಕ್‍ಡೌನ್, ಸ್ಮಾರ್ಟ್‍ಸಿಟಿ ಕಾಮಗಾರಿಗಳಿಂದಾಗಿ ಖಾಸಗಿ ಬಸ್ ನಿಲ್ದಾಣದ ಅಂಗಡಿ ಮಳಿಗೆಗಳಲ್ಲಿ ಒಂದು ವರ್ಷದಿಂದ ವ್ಯಾಪಾರ ವಹಿವಾಟು ನಡೆದಿಲ್ಲ. ಇದರಿಂದ ತುಂಬಾ ತೊಂದರೆಯಾಗಿದೆ. ಕುಟುಂಬ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಒಂದು ವರ್ಷದ ಬಾಡಿಗೆ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಬಾಡಿಗೆ ಮನ್ನಾ ಮಾಡುವಂತೆ ಕೋರಿ ಪಾಲಿಕೆಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಪೌರಾಡಳಿತ ಸಚಿವರು, ಶಾಸಕರಿಗೆ ಮನವಿ ಸಲ್ಲಿಸಿದ್ದೇವೆ. ಆದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವ್ಯಾಪಾರಿಗಳಾದ ಕರಿಬಸವಯ್ಯ, ದಿವಾಕರ್, ಮಂಜುನಾಥ್, ಪ್ರೇಮಕುಮಾರ್, ಆರಾಧ್ಯ, ಶಿವಣ್ಣ, ವಸೀಂ, ನಯಾಜ್, ಪಂಚಾಕ್ಷರಯ್ಯ, ಇನಾಯತ್ ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು