ಶಿರಾ: ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಶನಿವಾರ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲ್ಲೂಕಿನಲ್ಲಿ 484 ಮಂದಿ ಕಾರ್ಯಕರ್ತರು ಹಾಗೂ 484 ಮಂದಿ ಸಹಾಯಕಿಯರು ಕೆಲಸ ನಿರ್ವಹಿಸುತ್ತಿದ್ದು, ಇದರಲ್ಲಿ ಬಹಳಷ್ಟು ಮಂದಿ ಬಡವರಾಗಿದ್ದು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಸರ್ಕಾರ ನೀಡುವ ವೇತನ ಯಾವುದಕ್ಕೂ ಸಾಲದೆ ಸಂಕಷ್ಟದ ಬದುಕು ನಡೆಸುತ್ತಿದ್ದಾರೆ. ಅವರಿಗೆ ನಿವೇಶನವನ್ನು ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಎಲ್ಲರಿಗೂ ನಗರ ಪ್ರದೇಶದಲ್ಲಿ ಒಂದೇ ಕಡೆ ನಿವೇಶನ ನೀಡಲು ಸಾಧ್ಯವಾಗದಿದ್ದರೆ ಅವರು ಕಾರ್ಯನಿರ್ವಹಿಸುವ ಕೆಡೆ ನೀಡಿದರೆ ಅನುಕೂಲ. ಕೆಲವರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು ನಿಗದಿತ ₹1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದ್ದಾರೆ ಎಂದು ಪಡಿತರ ಚೀಟಿ ರದ್ದು ಪಡಿಸಲಾಗುತ್ತಿದೆ. ಮಾನವೀಯ ದೃಷ್ಟಿಯಿಂದ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿರಿಗೆ ಬಿಪಿಎಲ್ ಪಡಿತರ ಚೀಟಿ ನೀಡುವಂತೆ ಸರ್ಕಾರ ವಿಶೇಷ ಕಾನೂನು ರೂಪಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದ್ದಾರೆ.

ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಚ್.ಎನ್.ಕಲಾವತಮ್ಮ, ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ, ಖಚಾಂಚಿ ವನಜಾಕ್ಷಿ, ಲೀಲಾವತಿ, ಲಕ್ಕಮ್ಮ, ಕೆಂಪಮ್ಮ, ಚಂದ್ರಿಕಾ, ಮಹದೇವಮ್ಮ, ಲಲಿತಮ್ಮ, ಅನುಸೂಯ, ಮಂಜುಳಾ, ಶಶಿಕಲಾ, ರಾಧಾ, ಶಾರದಮ್ಮ, ಲಲಿತ, ಬೇಬಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.