ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಇಟ್ಟಿಗೆ ಕಾರ್ಖಾನೆಯಿಂದ ಇಬ್ಬರು ಬಾಲಕರ ರಕ್ಷಣೆ

Published 4 ಜನವರಿ 2024, 6:12 IST
Last Updated 4 ಜನವರಿ 2024, 6:12 IST
ಅಕ್ಷರ ಗಾತ್ರ

ತುಮಕೂರು: ನಗರದ ಹೊರ ವಲಯದ ಯಲ್ಲಾಪುರ ಸಮೀಪದ ಎಸ್‌ಆರ್‌ಎಸ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಲ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಬುಧವಾರ ರಕ್ಷಿಸಿದ್ದಾರೆ.

13 ವರ್ಷ ಹಾಗೂ 15 ವರ್ಷದ ಇಬ್ಬರು ಬಾಲಕರನ್ನು ರಕ್ಷಿಸಿದ್ದು, ಬಾಲ ಮಂದಿರಕ್ಕೆ ಸೇರಿಸಲಾಗಿದೆ. ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿದೆ ಎಂಬ ದೂರು ಆಧರಿಸಿ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ ನೇತೃತ್ವದ ತಂಡ ದಾಳಿ ನಡೆಸಿತ್ತು. ರಾಯಚೂರು ಮೂಲದ ಬಾಲಕರಿಂದ ಕೆಲಸ ಮಾಡಿಸುತ್ತಿರುವುದು ಪತ್ತೆಯಾಗಿದೆ. ಈ ವಿಚಾರವನ್ನು ಇಬ್ಬರು ಮಕ್ಕಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT