ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಟ್ಟಡಕ್ಕೆ ನಿವೇಶನ; ಶಾಸಕರಿಗೆ ಮನವಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ನೂತನ ಕಚೇರಿ ಹಾಗೂ 25 ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಸಚಿವೆ ಶಶಿಕಲಾ ಜೊಲ್ಲೆ
Last Updated 27 ನವೆಂಬರ್ 2020, 5:10 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಶಾಸಕ ಜ್ಯೋತಿ ಗಣೇಶ್ ₹ 5 ಕೋಟಿ ಅನುದಾನ ಒದಗಿಸಿದ್ದಾರೆ. ಜಿಲ್ಲೆಯಲ್ಲಿ ಸುಮಾರು 13 ಅಂಗನವಾಡಿ ಕಟ್ಟಡಗಳನ್ನು ಸಚಿವ ಮಾಧುಸ್ವಾಮಿ ಅವರು ತಮ್ಮ ಅನುದಾನದಲ್ಲಿ ನಿರ್ಮಿಸಿದ್ದಾರೆ. ಜಿಲ್ಲೆಯಲ್ಲಿ ಅಂಗನವಾಡಿ ಕಟ್ಟಡಗಳು ಇಲ್ಲದಿರುವ ಕಡೆ ಕಟ್ಟಡ ನಿರ್ಮಿಸಲು ಆಯಾ ಶಾಸಕರು ನಿವೇಶನವನ್ನು ಒದಗಿಸಿಕೊಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮನವಿ ಮಾಡಿದರು.

ನಗರದ ಜಿಲ್ಲಾ ಬಾಲಭವನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ನೂತನ ಕಚೇರಿ ಹಾಗೂ 25 ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ 2,000 ನೂತನ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. 900 ಅಂಗನವಾಡಿ ಕೇಂದ್ರಗಳಿಗೆ ಸೋಲಾರ್ ವ್ಯವಸ್ಥೆ ಕಲ್ಪಿಸುವ ಉದ್ದೇಶ ಇದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ 2ಲಕ್ಷ ಫಲಾನುಭವಿಗಳಿಗೆ ಬಾಂಡ್‍ ವಿತರಿಸಲಾಗಿದೆ. ಮಕ್ಕಳ ಪೋಷಕರು ಈ ಯೋಜನೆಯ ಲಾಭ ಪಡೆಯಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಜನರಲ್ಲಿ ಹೆಚ್ಚಿನ ಗೌರವವಿದೆ. ಆದರೆ ಚುನಾವಣಾ ಸಂದರ್ಭದಲ್ಲಿ ರಾಜಕಾರಣಿಗಳು ಇವರನ್ನು ಬಳಸಿಕೊಳ್ಳುತ್ತಿರುವುದು ಅಪಖ್ಯಾತಿಗೆ ಕಾರಣವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ತಮ್ಮ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ವಿವಿಧ ಯೋಜನೆ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಹಾಗೂ ವಿವಿಧ ಯೋಜನೆಗಳ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚೌಡಪ್ಪ, ನವ್ಯಬಾಬು, ಬಾಲಭವನ ಸದಸ್ಯರಾದ ಬಸವಯ್ಯ, ಜಯಣ್ಣ, ಮಹೇಶ್ ಕರ್ಜಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT