ತುಮಕೂರು: ಶಿರಾ ತಾಲ್ಲೂಕಿನ ಮರಡಿ ಗುಡ್ಡದ ರಂಗನಾಥ ಸ್ವಾಮಿ ದೇವಸ್ಥಾನದ ತಪ್ಪಲಿನಲ್ಲಿ ಅಂಬೇಡ್ಕರ್ ವಸತಿ ಶಾಲೆ ಆರಂಭಿಸಲು ಹೊಸದುರ್ಗದ ಶಾಂತವೀರ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಕೊಟ್ಟ ಶಂಕರ್ ವಿಷಾದಿಸಿದ್ದಾರೆ.

ಅನೇಕರ ಶ್ರಮದಿಂದ ವಸತಿ ಶಾಲೆ ಮಂಜೂರಾಗಿದೆ. ಭೂಮಿ ಪೂಜೆ ಸಹ ನಡೆದಿದೆ. ತಾಲ್ಲೂಕಿನ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಇಲ್ಲಿ ರೂಪಗೊಳ್ಳಲಿದೆ. ದೇವಸ್ಥಾನ ಕ್ಕೆ ಹೊಂದಿಕೊಂಡಂತೆ ನೂರಾರು ಎಕರೆ ಸರ್ಕಾರಿ ಜಮೀನು ಇದೆ. ಅಲ್ಲಿ ಪರಿಸರ ರಕ್ಷಣೆ ಮಾಡಲಿ. ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ವಸತಿ ಶಾಲೆಯಲ್ಲಿ ಕಲಿಯುವುದರಿಂದ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಆಗುವುದಿಲ್ಲ.

ಇದು ವಸತಿ ಶಾಲೆಗೆ ಉತ್ತಮ ಸ್ಥಳವಾಗಿದೆ. ಯಾವುದೇ ಕಾರಣಕ್ಕೂ ಅಂಬೇಡ್ಕರ್ ವಸತಿ ಶಾಲೆ ಬದಲಾವಣೆಗೆ ದಲಿತ ಸಂಘರ್ಷ ಸಮಿತಿ ಬಿಡುವುದಿಲ್ಲ. ಜಿಲ್ಲಾಧಿಕಾರಿ ಅವರು ಈ ಬಗ್ಗೆ ಗಮನಹರಿಸಿ ವಸತಿ ಶಾಲೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.