ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಪ್ರಯತ್ನ: ಲೋಕೇಶ್ ತಾಳಿಕಟ್ಟೆ

Published 11 ಮೇ 2024, 6:16 IST
Last Updated 11 ಮೇ 2024, 6:16 IST
ಅಕ್ಷರ ಗಾತ್ರ

ತುಮಕೂರು: ಶಿಕ್ಷಕರಿಗೆ ಕಾಲ್ಪನಿಕ ವೇತನ ಕೊಡಿಸುವುದು, ಬಡ್ತಿ ಪಡೆದ ಶಿಕ್ಷಕರಿಗೆ ಕಾಲಮಿತಿ ವೇತನ ಹೆಚ್ಚಳ, ವೇತನ ತಾರತಮ್ಯ ನಿವಾರಣೆಗೆ ಪ್ರಯತ್ನಿಸಲಾಗುವುದು ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಭರವಸೆ ನೀಡಿದರು.

ನಗರದಲ್ಲಿ ಗುರುವಾರ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿ, ‘ಶೈಕ್ಷಣಿಕ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗಾಗಿ ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ’ ಎಂದರು.

ಅನುದಾನರಹಿತ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ಸೇವಾಭದ್ರತೆ, ಸಮಾನ ವೇತನಕ್ಕೆ ಒತ್ತು ನೀಡುವುದು, 1995ರ ನಂತರದ ಕನ್ನಡ ಹಾಗೂ ಇತರೆ ಭಾಷೆಗಳ ಎಲ್ಲಾ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ಖಾಸಗಿ ಶಾಲೆಗಳ ಎಲ್ಲಾ ಶಿಕ್ಷಕರಿಗೂ ನಗದು ರಹಿತ ಆರೋಗ್ಯ ವಿಮೆ ಕೊಡಿಸುವುದು, ಶಾಲೆ, ಕಾಲೇಜುಗಳಿಗೆ ಮಾನ್ಯತೆ ನವೀಕರಣವನ್ನು ಭ್ರಷ್ಟಾಚಾರ ಮುಕ್ತವಾಗಿಸುವುದು, ಶಾಶ್ವತ ಮಾನ್ಯತೆ ನವೀಕರಣ ವ್ಯವಸ್ಥೆ, ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಎಲ್ಲಾ ವರ್ಗದ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸುವುದು. ಐಟಿಐ, ಡಿಪ್ಲೊಮಾ, ಬಿಇಡಿ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.

ಅನುದಾನಿತ ಶಾಲೆಗಳಲ್ಲಿ 2015ರ ನಂತರ ಖಾಲಿ ಉಳಿದಿರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿಸುವುದು, ಅನುದಾನಿತ ಶಾಲಾ, ಕಾಲೇಜು ತರಗತಿಗಳ ವಿದ್ಯಾರ್ಥಿಗಳ ಮಿತಿಯನ್ನು ಕನಿಷ್ಠ 10ಕ್ಕೆ ಇಳಿಸುವುದು, ವಿಳಂಬವಿಲ್ಲದೆ ಸಕಾಲಕ್ಕೆ ಸಂಬಳ ಕೊಡಿಸುವುದು ಸೇರಿದಂತೆ ಶಿಕ್ಷಕರು, ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ಕಡೆಯಿಂದ ಕಿರುಕುಳ ಆಗದಂತೆ ನೋಡಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಇಂದಿಗೂ ಸಹ ಬಗೆಹರಿಯದೇ ಉಳಿದುಕೊಂಡಿದ್ದು, ಅವುಗಳ ನಿವಾರಣೆಗೆ ಪ್ರಯತ್ನಿಸಲಾಗುವುದು ಎಂದರು.

ಹೋರಾಟದ ಫಲವಾಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ಕೋವಿಡ್ ಪ್ಯಾಕೇಜ್ ಸಿಕ್ಕಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಶಿಕ್ಷಕರ ಹಲವು ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ ಎಂದು ಹೇಳಿದರು.

ನಿವೃತ್ತ ಶಿಕ್ಷಕ ರೇಣುಕಯ್ಯ, ಉಪನ್ಯಾಸಕರಾದ ಗೋವಿಂದರಾಜು, ಎಂ.ಆರ್.ರಂಗಸ್ವಾಮಿ, ನಟರಾಜು, ಭೂತರಾಜು ಮುಂತಾದವರು ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT