ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರದಿಂದ ಸೇಡಿನ ಕ್ರಮ: ಸಿಪಿಎಂ

ಸಿಪಿಎಂ ಜಿಲ್ಲಾ ಸಮ್ಮೇಳನ
Published : 29 ಸೆಪ್ಟೆಂಬರ್ 2024, 7:00 IST
Last Updated : 29 ಸೆಪ್ಟೆಂಬರ್ 2024, 7:00 IST
ಫಾಲೋ ಮಾಡಿ
Comments

ತುಮಕೂರು: ಕೇಂದ್ರ ಸರ್ಕಾರ ಎನ್‌ಡಿಎ ಹೊರತಾದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಜನರು ಬದುಕಲಾಗದ ಹೊಸ ಕಾನೂನು ಜಾರಿ ಮಾಡುತ್ತಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಮೀನಾಕ್ಷಿ ಸುಂದರಂ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿಪಿಎಂ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ದುಡಿಯುವ ಜನರಿಗೆ ನ್ಯಾಯೋಚಿತ ಪಾಲು ಕೊಡುತ್ತಿಲ್ಲ. ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದೆ. ಸಂವಿಧಾನ ವಿರೋಧಿ ಪ್ರಯತ್ನ ನಡೆಸುತ್ತಿದೆ. ಇದು ಖಂಡನೀಯ, ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್‌ ಮುಜೀಬ್‌, ‘ರೈತರ, ಬಡವರ ಭೂಮಿ ಕಿತ್ತುಕೊಂಡು ಬಂಡವಾಳಗಾರರಿಗೆ ಕೊಡುತ್ತಿದ್ದಾರೆ. ಬಗರ್‌ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ, ನಿವೇಶನ ರಹಿತರಿಗೆ ವಸತಿ- ನಿವೇಶನ ನೀಡಲು ಭೂಮಿ ಸಿಗುವುದಿಲ್ಲ, ಅದೇ ಬಂಡವಾಳಗಾರರಿಗೆ ಕೊಡಲು ಎಲ್ಲಿಂದ ಬರುತ್ತದೆ’ ಎಂದು ಪ್ರಶ್ನಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯ ಬಿ.ಉಮೇಶ್‌, ‘ಸರ್ಕಾರಿ ಇಲಾಖೆಗಳಲ್ಲಿ ಲಂಚದ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಬಡವರ ಪ್ರಾಣದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಸಿಪಿಎಂ ಹೋರಾಟ ನಡೆಸಲಾಗುವುದು’ ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್‌.ಕೆ.ಸುಬ್ರಮಣ್ಯ, ಪದಾಧಿಕಾರಿಗಳಾದ ಜಿ.ಲೋಕೇಶ್‌, ಅಜ್ಜಪ್ಪ, ಷಣ್ಮುಖಪ್ಪ, ಶಾಹತಾಜ್‌, ರಂಗಧಾಮಯ್ಯ, ದೊಡ್ಡನಂಜಪ್ಪ, ಮುನ್ನಾಫ್, ಶಿವಕುಮಾರ, ಸುಜಿತ್‌ನಾಯಕ್ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT