ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕ್ರಾಂತಿ’

ಡಾ.ಜಿ.ಪರಮೇಶ್ವರ ಅಭಿಪ್ರಾಯ
Last Updated 3 ಸೆಪ್ಟೆಂಬರ್ 2021, 4:21 IST
ಅಕ್ಷರ ಗಾತ್ರ

ತುಮಕೂರು: ಔಪಚಾರಿಕ ಶಿಕ್ಷಣ ಪದ್ಧತಿಯನ್ನುಬದಲಿಸಿಕೊಳ್ಳುವ ಕಾಲ ಸಮೀಪಿ ಸಿದ್ದು, ದೇಶದಲ್ಲಿ ಜಾರಿಗೆ ಬಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರದಲ್ಲಿನ ಕ್ರಾಂತಿಗೆ ಪೂರಕವಾಗಿದೆ ಎಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟರು.

ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

ಲಾರ್ಡ್ ಮೆಕಾಲೆ ಶಿಕ್ಷಣ ಪದ್ಧತಿಯಲ್ಲಿ ತರಗತಿಗೆಅನುಗುಣವಾಗಿ ಪಠ್ಯಗಳನ್ನು ಅಳವಡಿಸಿ, ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ ಈಗ ಔದ್ಯೋಗಿಕ ಕ್ಷೇತ್ರದ ಅಗತ್ಯಕ್ಕೆ ತಕ್ಕಂತೆ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲು ರಾಷ್ಟ್ರೀಯ ಶಿಕ್ಷಣ ನೀತಿ ರೂಪುಗೊಂಡಿದೆ ಎಂದರು.

ಕೇವಲ ಉದ್ಯೋಗ ಸೃಷ್ಟಿಗೆ ಮಾತ್ರ ಶಿಕ್ಷಣ ಸೀಮಿತವಾಗದೆ ಮನುಷ್ಯನ ವ್ಯಕ್ತಿತ್ವ, ಸರ್ವತೋಮುಖ ಬೆಳವಣಿಗೆಗೆ ಅವಕಾಶ ಸಿಗಬೇಕು. ಈಗಾಗಲೇ ವೃತ್ತಿ ಶಿಕ್ಷಣ, ಕೌಶಲಾಭಿವೃದ್ಧಿ, ವ್ಯಕ್ತಿತ್ವ‌ವಿಕಸನಕ್ಕೆ ಪೂರಕವಾದ ತಂತ್ರಜ್ಞಾನ ಅಭಿವೃದ್ಧಿಯಾಗಿದ್ದು, ಶಿಕ್ಷಣದಲ್ಲಿ ಇದರ ಸಮರ್ಪಕ ಬಳಕೆಯಾಗಬೇಕು. ಅಂತರ
ರಾಷ್ಟ್ರೀಯ ಮಟ್ಟದ ವಿವಿಧ ಕೋರ್ಸ್‌ ಗಳು ದೇಶಕ್ಕೆ ಪರಿಚಯವಾಗುತ್ತಿವೆ. ಇದು ಶಿಕ್ಷಣದ ಮುಂದುವರಿದ ಭಾಗ ವಾಗಿದ್ದು, ನೂತನ ಶಿಕ್ಷಣ ಪದ್ಧತಿಗೆ ಹೊಂದಿಕೊಳ್ಳಬೇಕಾಗಿದೆ ಎಂದು ಸಲಹೆ ಮಾಡಿದರು.

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಪ್ರಾರಂಭವಾದ 40 ವರ್ಷಗಳಲ್ಲಿ 35 ಸಾವಿರ ಎಂಜಿನಿಯರ್, 6 ಸಾವಿರ ವೈದ್ಯರನ್ನು ನಾಡಿಗೆ ಕೊಡುಗೆಯಾಗಿ ನೀಡಲಾಗಿದೆ ಎಂದರು.

ನೂತನ ಶಿಕ್ಷಣ ನೀತಿ ಕುರಿತು ಮಾತನಾಡಿದ ಡಾ.ಮಧುಸೂದನ್, ‘ಈಗಿರುವ ಶಿಕ್ಷಣ ವ್ಯವಸ್ಥೆಯನ್ನು ಹಲವು ಸುಧಾರಣೆಗಳ ಮೂಲಕ ಹೊಸ ಶಿಕ್ಷಣ ನೀತಿ ಸಂಪೂರ್ಣ ಬದಲಿಸಲಿದೆ. ಇನ್ನು ಮುಂದೆ ಉನ್ನತ ಶಿಕ್ಷಣಕ್ಕೆ ಒಂದೇ ಪ್ರಾಧಿಕಾರವಿರುತ್ತದೆ. ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನಿರ್ದಿಷ್ಟ ಶುಲ್ಕ, ಪದವಿ ಕೋರ್ಸ್‌ಗಳಿಗೆ 4 ವರ್ಷ ಇರುತ್ತದೆ. ಮೂರು ವರ್ಷ ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ, ಪದವಿ ಕೋರ್ಸ್‌ಗಳಲ್ಲಿ ಬಹುಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶಗಳಿರುತ್ತವೆ’ ಎಂದು ಅವರು ವಿವರಿಸಿದರು.

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಬಿ.ನಂಜುಂಡಪ್ಪ, ಡಾ.ವೈ.ಎಂ.ರೆಡ್ಡಿ, ಸಿದ್ಧಾರ್ಥ ಪ್ರೌಢಶಾಲೆ ಹಿರಿಯ ಮುಖ್ಯೋಪಾಧ್ಯಾಯ ಹನುಮಂತರಾಜು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT