ಶನಿವಾರ, ಅಕ್ಟೋಬರ್ 24, 2020
28 °C
ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಗೆ ನಿಗದಿ

ಮೂವರು ಮಹಿಳೆಯರ ಮಧ್ಯೆ ಪೈಪೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರಟಗೆರೆ: ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

ಒಟ್ಟು 15 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ 8 ಸದಸ್ಯರನ್ನು ಹೊಂದಿರುವ ಜೆಡಿಎಸ್‌ಗೆ ಸ್ಪಷ್ಟ ಬಹುಮತವಿದೆ. 5 ಕಾಂಗ್ರೆಸ್, ಒಬ್ಬರು ಬಿಜೆಪಿ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. 4ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ನರಸಿಂಹಪ್ಪ ಅವರ ನಿಧನ
ದಿಂದಾಗಿ ಸದ್ಯ ಕಾಂಗ್ರೆಸ್‌ನ ನಾಲ್ವರು ಸದಸ್ಯರಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡದ ಮೂವರು ಮಹಿಳಾ ಆಕಾಂಕ್ಷಿಗಳಿದ್ದಾರೆ. ಕೆ.ವಿ. ಕಾವ್ಯ, ಮಂಜುಳಾ, ಜಿ.ಎನ್‌. ಭಾಗ್ಯಮ್ಮ ನಡುವೆ
ಪೈಪೋಟಿಯಿದೆ. ಮೂವರು ಆಕಾಂಕ್ಷಿಗಳ ಪತಿಯರು ಪಕ್ಷದ ಹಿರಿಯ ಮುಖಂಡರ ಮನ ಒಲಿಸಲು ಯತ್ನಿಸುತ್ತಿದ್ದಾರೆ. ಪಕ್ಷದ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನದಲ್ಲಿದ್ದಾರೆ.

ಮೂವರು ಆಕಾಂಕ್ಷಿಗಳ ನಡುವೆ ಒಪ್ಪಂದವಾಗಿ ಮೂವರು ನಿರ್ದಿಷ್ಟ ತಿಂಗಳಿಗೆ ಅಧಿಕಾರ ಹಂಚಿಕೊಳ್ಳಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಪ್ರತಿಯೊಬ್ಬರೂ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.

ಈ ಹಿಂದೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ಆದರೆ ಸರ್ಕಾರ ಆ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆಗ ಜೆಡಿಎಸ್‌ಗೆ ಬಹುಮತ ಇದ್ದರೂ, ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿತ್ತು. ಈ ಬಗ್ಗೆ ಮಾತುಕತೆಯೂ ನಡೆದಿತ್ತು. ಆದರೆ ಈಗ ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾತಿ ನಿಗದಿಯಾಗಿದ್ದು, ಕಾಂಗ್ರೆಸ್‌ಗೆ ಅಧಿಕಾರ ಕೈ ತಪ್ಪಿದೆ. ಸ್ಥಳೀಯ ಶಾಸಕ ಜಿ.ಪರಮೇಶ್ವರ ಅವರಿಗೆ ಮುಖಭಂಗ ಮಾಡುವ ಉದ್ದೇಶದಿಂದಲೇ ಮೀಸಲಾತಿಯನ್ನು ಎಸ್‌ಟಿ ಮಹಿಳೆಗೆ ಬದಲಾಯಿಸಲಾಗಿದೆ. ಈ ಬದಲಾವಣೆಯಲ್ಲಿ ಕೆ.ಎನ್. ರಾಜಣ್ಣ ಕೈವಾಡ ಇದೆ ಎಂಬ ವಿಶ್ಲೇಷಣೆಗಳೂ ನಡೆದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು