ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗಳಿಗೆ ನದಿ ನೀರು, ಜಲಾಂದೋಲನ; 6ರಂದು ಸಭೆ

ಸಂಸದರಿಂದ ಬಿ.ಎಸ್.ಯಡಿಯೂರಪ್ಪ ಜತೆ ಸಮಾಲೋಚನ
Last Updated 1 ಜುಲೈ 2019, 16:35 IST
ಅಕ್ಷರ ಗಾತ್ರ

ತುಮಕೂರು: ಕೆರೆಗಳಿಗೆ ನದಿ ನೀರು ಹರಿಸುವುದು ಮತ್ತು ಜಲಾಂದೋಲನದ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಜುಲೈ 6ರಂದು ಸಂಜೆ 6 ಗಂಟೆಗೆ ಸಿದ್ಧಗಂಗಾಮಠ ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ಬಳಿ ಬಿಜೆಪಿ ಕರ್ನಾಟಕ ಅಭಿವೃದ್ಧಿ ಮಾಹಿತಿ ಪ್ರಕೋಷ್ಠ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.

ಜಲಾಂದೋಲನದ ಬೃಹತ್ ಸಮಾವೇಶವನ್ನು ತುಮಕೂರಿನಲ್ಲಿ ನಡೆಸುವ ಪ್ರಯುಕ್ತ ಪೂರ್ವಭಾವಿಯಾಗಿ ಧಾರ್ಮಿಕ ಮುಖಂಡರ, ಸಂಘ ಸಂಸ್ಥೆಗಳ ಪದಾಧಿಕಾರಿಗಳ, ವಿಷಯ ತಜ್ಞರ, ಪರಿಸರ ಆಸಕ್ತರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಈ ಜಲಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ಭಾನುವಾರಜಿ.ಎಸ್. ಬಸವರಾಜು ಅವರು ವಿಧಾನಸಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿ ನೀರಿನ ಹಾಹಾಕಾರ ಹೋಗಲಾಡಿಸಲು ಕೆರೆಗಳನ್ನು ತುಂಬಿಸಬೇಕು. ರಾಜ್ಯದ 38,608 ಕೆರೆಗಳಿಗೆ ಮಳೆ ನೀರು ತುಂಬಿಸಬೇಕು. ನದಿಗಳಿಂದ ಕುಡಿಯಲು ನೀರು ತುಂಬಿಸಬೇಕು. ಮಲೆನಾಡು ಪ್ರದೇಶದಲ್ಲಿ ಕಿಂಡಿ ಯೋಜನೆ ರೂಪಿಸುವ ಬಗ್ಗೆ ಸಮಾಲೋಚನೆ ನಡೆಸಿದರು.

ಈ ರೀತಿ ಮಾಡುವುದರಿಂದ ಅಂತರ್ಜಲ ಅಭಿವೃದ್ಧಿಯಾಗುತ್ತದೆ. ನೀರಿನ ಸಮಸ್ಯೆಯೂ ಪರಿಹಾರ ಕಾಣಲಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿಗೆ ಈ ಕುರಿತು ಪತ್ರ ಬರೆಯಬೇಕು. ಕೇಂದ್ರ ಸರ್ಕಾರಕ್ಕೆ ಯೋಜನೆ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು. ಬಿಜೆಪಿಯಿಂದ ಕೆರೆಗಳಿಗೆ ನದಿ ನೀರು ತುಂಬಿಸುವ ಬೃಹತ್ ಆಂದೋಲನ ರೂಪಿಸಬೇಕು ಎಂದು ವಿವರಿಸಿದರು.

ಯಡಿಯೂರಪ್ಪ ಮಾತನಾಡಿ, ‘ ರಾಜ್ಯದ ಎಲ್ಲ ಭಾಗದಲ್ಲೂ ನೀರಿಗೆ ತೊಂದರೆಯಾಗಿದೆ. ಯಾವ ರೀತಿ ಪರಿಹಾರ ದೊರಕಿಸಬೇಕು ಎಂಬ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಪ್ರಧಾನಿ ಮತ್ತು ಜಲಶಕ್ತಿ ಸಚಿವರ ಬಳಿ ನಿಯೋಗದಲ್ಲಿ ತೆರಳಿ ಮನವರಿಕೆ ಮಾಡಿಕೊಡಲಾಗುವುದು’ ಎಂದು ಹೇಳಿದರು.

’ಲಿಂಗನಮಕ್ಕಿಯಲ್ಲಿ 150 ಟಿಎಂಸಿ ನೀರು ಸಂಗ್ರಹ ಮಾಡಬಹುದಾಗಿದೆ. ಆಘನಾಶಿನಿ, ಭೇಡ್ತಿ, ವರದಾ ನೀರನ್ನು ಲಿಂಗನಮಕ್ಕಿಗೆ ತರಬಹುದು. ಪರಿಸರಕ್ಕೆ ಧಕ್ಕೆ ಆಗದ ರೀತಿ ನೀರನ್ನು ತರಲು ಆ ಭಾಗದ ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸಂಸದ ನಿಯೋಗದಲ್ಲಿದ್ದ ಅಭಿವೃದ್ಧಿ ರೆವಲ್ಯೂಷನ್ ಫೋರಂ ಅಧ್ಯಕ್ಷ ಕುಂದರನಹಳ್ಳಿ ರಮೇಶ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT