ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ | ಅಪಘಾತ: ವ್ಯಕ್ತಿ ಸಾವು, ಇಬ್ಬರಿಗೆ ಗಂಭೀರ ಗಾಯ

Published 15 ಮಾರ್ಚ್ 2024, 15:31 IST
Last Updated 15 ಮಾರ್ಚ್ 2024, 15:31 IST
ಅಕ್ಷರ ಗಾತ್ರ

ಕೊರಟಗೆರೆ: ಜಿ.ನಾಗೇನಹಳ್ಳಿ ಗೊಲ್ಲರಹಟ್ಟಿ ಬಳಿ ಶುಕ್ರವಾರ ಕಾರು ಮತ್ತು ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿವೆ.

ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿ ಬೆಲ್ಲದಮಡುಗು ಗ್ರಾಮದ ಕೃಷ್ಣಮೂರ್ತಿ (56) ಮೃತಪಟ್ಟವರು. ಅದೇ ಗ್ರಾಮದ ಪ್ರಸನ್ನಕುಮಾರ ಎಂಬುವರಿಗೆ ಎರಡೂ ಕಾಲುಗಳು ಮುರಿದಿವೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಗೊಲ್ಲರಹಟ್ಟಿ ವಾಸಿ ಸಿದ್ದಗಂಗಯ್ಯ ಎಂಬುವರಿಗೆ ತೀವ್ರ ಗಾಯಗಳಾಗಿವೆ.

ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಎದುರಿಗೆ ಬರುತ್ತಿದ್ದ ದ್ವಿಕ್ರವಾಹನಕ್ಕೆ ಡಿಕ್ಕಿಹೊಡೆದು ಆನಂತರ ಚಾಲಕನ ನಿಯಂತ್ರಣ ತಪ್ಪಿ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಿದ್ದಗಂಗಯ್ಯ ಎಂಬುವರಿಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಮೇಲೆ ಕೇಸು ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಿಪಿಐ ಆರ್.ಪಿ.ಅನಿಲ್, ಪಿಎಸ್ಐ ಬಿ.ಮಂಜುನಾಥ್ ಭೇಟಿ ನೀಡಿದ್ದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT