ತುಮಕೂರು: ಬಿಜೆಪಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಮಾರ್ಚ್ 21ರಂದು ನಗರ ತಲುಪಲಿದೆ. ರೋಡ್ ಶೋ ನಡೆಯಲಿದೆ.
ಮಂಗಳವಾರ ಬೆಳಿಗ್ಗೆ 11 ಗಂಟೆಗೆ ತುರುವೇಕೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ಸಾರ್ವಜನಿಕ ಸಭೆ, ರೋಡ್ ಶೋ ಏರ್ಪಡಿಸಲಾಗಿದೆ. ಬಿಜೆಪಿ ಸಂಸದೀಯ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವ ಆರ್.ಅಶೋಕ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಇಲ್ಲಿ ಸೋಮವಾರ ಹೇಳಿದರು.
ಮಧ್ಯಾಹ್ನ 1 ಗಂಟೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿಯಲ್ಲಿ ಯಾತ್ರೆ ಸಾಗಲಿದೆ. ಸಂಜೆ 5 ಗಂಟೆಗೆ ನಗರದಲ್ಲಿ ರೋಡ್ ಶೋ ಇರಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ‘ನಗರದ ಬಿಜಿಎಸ್ ವೃತ್ತದಿಂದ ಯಾತ್ರೆ ಆರಂಭವಾಗಲಿದೆ. ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಎಂ.ಜಿ ರಸ್ತೆ, ಕಾರ್ಯಪ್ಪ ರಸ್ತೆ, ಭದ್ರಮ್ಮ ಛತ್ರ ವೃತ್ತ, ರಾಧಾಕೃಷ್ಣ ರಸ್ತೆ, ಎಸ್.ಎಸ್. ಪುರಂ ರಸ್ತೆಯ ಮುಖಾಂತರ ಎಸ್‌ಐಟಿ ಮುಖ್ಯರಸ್ತೆಯಲ್ಲಿ ಸಾಗಿ ಎಸ್‌ಐಟಿ ಕಾಲೇಜು ಬಳಿ ಕೊನೆಗೊಳ್ಳಲಿದೆ. ಕಲಾ ತಂಡಗಳು ಯಾತ್ರೆಗೆ ಸಾಥ್ ನೀಡಲಿವೆ’ ಎಂದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.