ಮಂಗಳವಾರ, ಜುಲೈ 27, 2021
23 °C

₹ 2.20 ಲಕ್ಷ ಮೌಲ್ಯದ ಆಭರಣ ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ತಾಲ್ಲೂಕಿನ ಕೊಟ್ಟ ರಂಗಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಮನೆಯ ಹಿಂದಿನ ಬಾಗಿಲಿನ ಬೀಗ ಒಡೆದ ಕಳ್ಳರು ಸುಮಾರು ₹ 2.20 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ.

ಕೊಟ್ಟ ರಂಗಾಪುರ ಗ್ರಾಮದ ರಂಗಪ್ಪ ಅವರು ತಮ್ಮ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಮಂಗಳವಾರ ರಾತ್ರಿ ಶೆಕೆಯಿಂದಾಗಿ ಮನೆಗೆ ಬೀಗ ಹಾಕಿ ಹೊರಗೆ ಮಲಗಿದ್ದ ಸಮಯದಲ್ಲಿ ಕಳ್ಳತನ ನಡೆದಿದೆ. ಚಿನ್ನದ ಸರ, ನಕ್ಲೇಸ್, ದೊಡ್ಡವರ 3 ಹಾಗೂ ಮಕ್ಕಳ 4 ಉಂಗುರ, ಕಿವಿ ಓಲೆ ಹಾಗೂ ₹ 60 ಸಾವಿರ ನಗದು ಕಳ್ಳತನವಾಗಿದೆ.

ಸ್ಥಳಕ್ಕೆ ಶಿರಾ ನಗರ ಠಾಣೆಯ ಸಿಪಿಐ ನಿರ್ಮಲ, ಪಿಎಸ್ಐ ಭಾರತಿ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.