ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹25 ಲಕ್ಷ ಜಪ್ತಿ

Published 26 ಮಾರ್ಚ್ 2024, 4:23 IST
Last Updated 26 ಮಾರ್ಚ್ 2024, 4:23 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಾದ್ಯಂತ ಮಾರ್ಚ್‌ 16ರಿಂದ 25ರ ವರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹25.97 ಲಕ್ಷ ಹಣವನ್ನು ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದರಲ್ಲಿ ದಾಖಲೆಗಳಿಲ್ಲದ ₹10 ಲಕ್ಷ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಉಳಿದ ₹15.96 ಲಕ್ಷವನ್ನು ಜಿಲ್ಲಾ ಖಜಾನೆಗೆ ಜಮೆ ಮಾಡಲಾಗಿದೆ. ಸಮರ್ಪಕ ದಾಖಲೆ ಒದಗಿಸಿದ ನಂತರ ಸಂಬಂಧಿಸಿದವರಿಗೆ ಹಣ ವಾಪಸ್‌ ನೀಡಲಾಗುತ್ತದೆ.

₹1.70 ಲಕ್ಷ ಮೌಲ್ಯದ 5.35 ಕೆ.ಜಿ ಗಾಂಜಾ, ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿಟ್ಟಿದ್ದ ₹3.50 ಲಕ್ಷ ಬೆಲೆ ಬಾಳುವ 73 ಬಾಕ್ಸ್‌ ಕುಕ್ಕರ್, 700 ಗೋಡೆ ಗಡಿಯಾರಗಳನ್ನು ಜಪ್ತಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ, ಅಬಕಾರಿ ಕಾಯ್ದೆ ಉಲ್ಲಂಘಿಸಿದ್ದಕ್ಕೆ 231 ಪ್ರಕರಣಗಳನ್ನು ದಾಖಲಿಸಲಾಗಿದೆ.

7,763 ಲೀಟರ್‌ ಭಾರತೀಯ ತಯಾರಿಕಾ ಮದ್ಯ, 17,648 ಲೀಟರ್‌ ಬಿಯರ್‌, 6 ಲೀಟರ್‌ ಸೇಂದಿ ಸೇರಿ ₹59.12 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ.

‘ಪಾರದರ್ಶಕವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ 58 ವಿಚಕ್ಷಣ ದಳ, 44 ಸ್ಥಿರ ಕಣ್ಗಾವಲು ತಂಡ ಹಾಗೂ 11 ಅಬಕಾರಿ ತಂಡಗಳನ್ನು ರಚಿಸಿ ನಿಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT