ಬುಧವಾರ, ಸೆಪ್ಟೆಂಬರ್ 30, 2020
20 °C

ಗ್ರಾಮಾಂತರಕ್ಕೆ ನಿಗದಿತ ಹೇಮೆ ನೀರು ಹರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ನಿಗದಿ ಆಗಿರುವ ಹೇಮಾವತಿ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಒತ್ತಾಯಿಸುವೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.

ತಾಲ್ಲೂಕಿನ ನಾಗವಲ್ಲಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ವರ್ಷ ಗ್ರಾಮಾಂತರ ಕ್ಷೇತ್ರಕ್ಕೆ ಹಂಚಿಕೆ ಆಗಿರುವ ಹೇಮಾವತಿ ನೀರು ಹರಿಸಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದೆ. ಹೇಮಾವತಿ ಜಲಾಶಯ ತುಂಬುವ ಹಂತದಲ್ಲಿ ಇದೆ. ಆದ್ದರಿಂದ ಈ ಬಾರಿ ಎಲ್ಲ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ನಾಗವಲ್ಲಿ ಮತ್ತು ಹೊನ್ನುಡಿಕೆ ಕೆರೆಗಳಿಗೆ ನೀರು ಹರಿಸುವ ಮೂಲಕ ಇಷ್ಟು ವರ್ಷಗಳ ಕಾಲ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಸೋಮವಾರ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಒತ್ತಾಯಿಸುವೆ ಎಂದರು.

ನಾಗವಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‍ ಸೇರುತ್ತಿರುವುದು ಸಂತಸದ ವಿಚಾರ. ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.

ಜೆಡಿಎಸ್ ಮುಖಂಡ ಹಾಲನೂರು ಅನಂತಕುಮಾರ್, ತಾ.ಪಂ ಸದಸ್ಯ ದೀಪು, ರಾಮಣ್ಣ, ರಾಜು, ಗ್ರಾ.ಪಂ ಸದಸ್ಯ ವಿಜಯ್, ಸುರೇಶ್, ಸ್ವಾಮಿ, ಕೃಷ್ಣಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು