ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1.5 ಕೋಟಿ ವೆಚ್ಚದ ಸಾಯಿ ಮಂದಿರಕ್ಕೆ ಭೂಮಿ ಪೂಜೆ

Last Updated 13 ಮಾರ್ಚ್ 2020, 11:27 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಶ್ರದ್ಧೆ, ಭಕ್ತಿ ಮತ್ತು ನಿಷ್ಠೆ ಎಲ್ಲಿರುತ್ತದೊ ಅಲ್ಲಿ ದೇವರಿರುತ್ತಾರೆ. ತಾಳ್ಮೆ ಕಳೆದುಕೊಳ್ಳದೆ, ತಮ್ಮಲ್ಲಿರುವ ಆತ್ಮವಿಶ್ವಾಸ ಹೆಚ್ಚಿಸಿಕೊಂಡಾಗ ಮಾತ್ರ ಯಶಸ್ಸಿನ ಮೆಟ್ಟಿಲೇರಲು ಸಾಧ್ಯ ಎಂದು ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಕರಿ ವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ತಿಳಿಸಿದರು.

ಹೋಬಳಿಯ ಗುಂಡಗಲ್ಲು ಗ್ರಾಮದ ಹೊರವಲಯದಲ್ಲಿ ಸುಮಾರು 1.5 ಕೋಟಿ ವೆಚ್ಚದಲ್ಲಿ ಶಿರಿಡಿ ಸಾಯಿ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸಾಯಿಬಾಬಾ ಚಿಕ್ಕಮಗುವಿನಂತೆ. ಯಾರು ಪ್ರೀತಿ ಮತ್ತು ಶ್ರದ್ಧಾ- ಭಕ್ತಿಯಿಂದ ನಮಿಸುತ್ತಾರೊ ಅವರಿಗೆ ಒಲಿಯುತ್ತಾರೆ ಎಂದರು. ದೇವಸ್ಥಾನ ನಿರ್ಮಾಣಕ್ಕೆ ಭೂಮಿ ನೀಡಿದ ಮರಿಯಪ್ಪ ಅವರಿಗೆ ಅಭಿನಂದಿಸಿದರು.

ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಇಂದಿರದೇನಾನಾಯ್ಕ್ ಮಾತನಾಡಿ, ಗಡಿಭಾಗದ ಕುಗ್ರಾಮದಲ್ಲಿ ಬಾಬಾರವರ ಭವ್ಯವಾದ ದೇವಸ್ಥಾನ ನಿರ್ಮಾಣವಾಗಲು ತಯಾರಿ ನಡೆದಿರುವುದು ಸಂತಸ ತಂದಿದೆ. ಈ ಕಾರ್ಯಕ್ಕೆ ಸಂಕಲ್ಪ ಮಾಡಿದವರಿಗೆ ಒಳ್ಳೆಯದಾಗಲಿ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಆದಿನಾರಾಯಣರೆಡ್ಡಿ, ಕಡಗತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಜೆ. ರಂಗನಾಥ್ ಮಾತನಾಡಿದರು.

ರಾಷ್ಟ್ರೀಯ ಸಹಕಾರಿ ಸಂಸ್ಥೆ ಕ್ರಿಬ್ಕೋ ನಿರ್ದೇಶಕ ಆರ್. ರಾಜೇಂದ್ರ, ಶಿರಿಡಿ ಸಾಯಿಬಾಬಾ ಸೇವಾ ಸಮಿತಿ ಕಾರ್ಯದರ್ಶಿ ನಾಗಭೂಷಣ್, ಬಿ.ವಿಠಲ, ರಾಧಕೃಷ್ಣರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಳಿನಾ ರಾಜಶೇಖರರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರವೀಣ್, ಮುಖಂಡರಾದ ಕೆ.ಟಿ. ತಿಮ್ಮಾರೆಡ್ಡಿ, ಗೋಪಾಲಕೃಷ್ಣಾರೆಡ್ಡಿ, ಜಗನ್ನಾಥ್, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT