ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ವಿ.ವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ

Last Updated 26 ಆಗಸ್ಟ್ 2022, 21:05 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ವಿ.ವಿ ಸಿಂಡಿಕೇಟ್ ಸಭೆಯಲ್ಲಿ ಶುಕ್ರವಾರ ಒಪ್ಪಿಗೆ ನೀಡಲಾಗಿದೆ.

ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಸಂಬಂಧ ಸಿಂಡಿಕೇಟ್ ಸದಸ್ಯ ಟಿ.ಡಿ. ವಿನಯ್ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಸಭೆ ಒಮ್ಮತದಿಂದ ಒಪ್ಪಿಗೆ ನೀಡಲಾಯಿತು. ವಿನಯ್ ಅವರು ಈಗಾಗಲೇ ಈ ಪೀಠ ಸ್ಥಾಪನೆಗೆ ₹ 1 ಲಕ್ಷ ದೇಣಿಗೆ ನೀಡಿದ್ದಾರೆ. ಮತ್ತೊಬ್ಬ ಸದಸ್ಯ ಎಚ್. ಪ್ರಸನ್ನ
ಕುಮಾರ್ ವೈಯಕ್ತಿಕವಾಗಿ ₹25 ಸಾವಿರ ದೇಣಿಗೆ ನೀಡುವುದಾಗಿ ಸಭೆಯಲ್ಲಿ ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಈಗಾಗಲೇ, ವಿವಿಯಲ್ಲಿ ವಿವಿಧ 14 ಪೀಠ ಸ್ಥಾಪಿಸಲಾಗಿದ್ದು, ಈಗ ಸಾವರ್ಕರ್ ಅಧ್ಯಯನ ಪೀಠ ಸ್ಥಾನ ಪಡೆದಿದೆ. ತಿಗಳ ಜನಾಂಗದ ಅಧ್ಯಯನ ಪೀಠವನ್ನು ವಿ.ವಿಯಲ್ಲೇ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಗಳರ ಸಮಾವೇಶದಲ್ಲಿ
ಪ್ರಕಟಿಸಿದ್ದಾರೆ. ಇದು ಸ್ಥಾಪನೆಯಾದರೆ ಪೀಠಗಳ ಸಂಖ್ಯೆ ಮತ್ತಷ್ಟು ಹೆಚ್ಚಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT