ಮಂಗಳವಾರ, ಜೂನ್ 15, 2021
26 °C

ಸರ್ಕಾರಗಳಿಂದ ದಮನಕಾರಿ ನೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸರ್ಕಾರಗಳು ಕೊರೊನಾ ಸೋಂಕಿನ ಭೀತಿ ಹುಟ್ಟಿಸಿ ದಮನಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ. ಇದು ರೈತ, ಕಾರ್ಮಿಕ ಮತ್ತು ಜನ ವಿರೋಧಿ ಆಗಿದೆ ಎಂದು ಪಿ‌ಯುಸಿಎಲ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ದೊರೈರಾಜ್ ಆರೋಪಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ‘ನಾವು ಭಾರತೀಯರು’ ಸಂಘಟನೆಯಿಂದ ಕ್ವಿಟ್ ಇಂಡಿಯಾ ದಿನದ ಅಂಗವಾಗಿ ನಡೆದ ಭಾರತ ಉಳಿಸಿ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೊರೊನಾ ಕಾಯಿಲೆಯನ್ನು ಭಯೋತ್ಪಾದನೆ ಎನ್ನುವ ರೀತಿ ಬಿಂಬಿಸಲಾಗುತ್ತಿದೆ. ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರಗಳು ಬಂಡವಾಳಶಾಹಿ, ಶ್ರೀಮಂತರೊಂದಿಗೆ ಸೇರಿ ಕೋಮುವಾದಿ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಹೋರಾಟಗಳು ಅಗತ್ಯ ಎಂದು ಪ್ರತಿಪಾದಿಸಿದರು.

ಮುಖಂಡ ತಾಜುದ್ದೀನ್ ಷರೀಫ್, ‘ದೇಶದಲ್ಲಿ ಪ್ರಗತಿಪರರನ್ನು ಬಂಧಿಸುವ, ಅವರನ್ನು ಸುಳ್ಳು ಮೊಕದ್ದಮೆಗಳಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸುವ ಸೇಡಿನ ಕ್ರಮವನ್ನು ಸರ್ಕಾರಗಳು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ರೈತ ಮುಖಂಡ ಬಿ.ಉಮೇಶ್, ಪರಿಸರವಾದಿ ಸಿ.ಯತಿರಾಜು, ಖಲೀಲ್ ಅಹಮದ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.