ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೀವ ಉಳಿಸಿ, ಜೀವನ ರಕ್ಷಿಸಿ’ ಹೋರಾಟ

ಸಿಪಿಎಂ ಕಾರ್ಯಕರ್ತರ ಪ್ರತಿಭಟನೆ
Last Updated 2 ಜೂನ್ 2021, 2:00 IST
ಅಕ್ಷರ ಗಾತ್ರ

ತುಮಕೂರು: ಕೋವಿಡ್‌–19ನಿಂದ ಜೀವ ಉಳಿಸಿ, ಜೀವನ ರಕ್ಷಿಸಿ, ಮೂರನೇ ಅಲೆ ಎದುರಿಸಲು ಈಗಿನಿಂದಲೇಸನ್ನದ್ಧರಾಗುವಂತೆ ಒತ್ತಾಯಿಸಿ ಎಡಪಕ್ಷಗಳ ನೇತೃತ್ವದಲ್ಲಿ ಮಂಗಳವಾರ ಮನೆಗಳಲ್ಲೇ ಪ್ರತಿಭಟನೆ ನಡೆಯಿತು.

ಸಿಪಿಐ, ಸಿಪಿಎಂ, ಸಿಪಿಐ(ಎಂಎಲ್) ಲಿಬರೇಷನ್, ಎಸ್‌ಯುಸಿಐಸಿ, ಎಐಎಫ್‌ಬಿ, ಆರ್‌ಪಿಐ (ಪ್ರಕಾಶ್ ಅಂಬೇಡ್ಕರ್), ಸ್ವರಾಜ್ ಇಂಡಿಯಾ ಸಂಘಟನೆಗಳ ನೇತೃತ್ವದಲ್ಲಿ ನಗರದ ನಜರಾಬಾದ್, ಮೇಳೆಕೋಟೆ, ಶಿರಾಗೇಟ್, ಊರುಕೆರೆ ಬಳಿ ಸಿಪಿಎಂ ಕಾರ್ಯಕರ್ತರು ಭಿತ್ತಿಪತ್ರ ಹಿಡಿದು ಪ್ರತಿಭಟನಾ ಪ್ರದರ್ಶನ ನಡೆಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ರಾಜ್ಯ ಸಮಿತಿ ಸದಸ್ಯ ಸೈಯದ್ ಮುಜೀಬ್, ಮುಖಂಡರಾದ ರಾಜು, ಜಗದೀಶ್, ಹಲೀಮಾ, ಶಂಕರಪ್ಪ, ವಸೀಂ ಮತ್ತಿತರರು ಪ್ರತಿಭಟನಾ ಪ್ರದರ್ಶನದಲ್ಲಿ ಭಾಗಿಯಾಗಿದ್ದರು.

ಎಲ್ಲರಿಗೂ ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ ಮತ್ತು ಚಿಕಿತ್ಸೆ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಲಾಕ್‌ಡೌನ್ ಸಮಯದಲ್ಲಿ ಆದಾಯ ತೆರಿಗೆಯಿಂದ ಹೊರಗಿರುವ ಎಲ್ಲಾ ಕುಟುಂಬಗಳಿಗೆ 6 ತಿಂಗಳು ಮಾಸಿಕ ₹10 ಸಾವಿರ ನೇರ ನಗದು ವರ್ಗಾವಣೆ ಮಾಡಬೇಕು. ತಲಾ 10 ಕೆ.ಜಿ ಉಚಿತವಾಗಿ ಆಹಾರ ಧಾನ್ಯ ವಿತರಿಸಬೇಕು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೆಲಸಗಳನ್ನು ವಾರ್ಷಿಕ 200 ದಿನಗಳಿಗೆ ಹೆಚ್ಚಿಸಿ ದಿನಕ್ಕೆ ₹600 ಕೂಲಿಯೊಂದಿಗೆ ನಗರ ಪ್ರದೇಶಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಲಾಯಿತು.

ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿ ಕಾರ್ಯಕರ್ತರು ಸೇನಾನಿಗಳಾಗಿ ಸೆಣೆಸುತ್ತಿದ್ದಾರೆ. ಅಂತಹ ಮುಂಚೂಣಿ ಕಾರ್ಯಕರ್ತರಿಗೆ ಅಗತ್ಯ ಜೀವ ರಕ್ಷಕ ವೈಯಕ್ತಿಕ ಸಲಕರಣೆ ನೀಡಬೇಕು. ವೇತನ ಮತ್ತಿತರೆ ಸೌಲಭ್ಯಗಳನ್ನು ನಿಗದಿತವಾಗಿ ಖಾತರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT