ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ‘ಕೀಳರಿಮೆ ಬಿಟ್ಟು ಹೊರ ಬನ್ನಿ’

ಸವಿತಾ ಮಹರ್ಷಿ ಜಯಂತಿ ಆಚರಣೆ
Published 17 ಫೆಬ್ರುವರಿ 2024, 6:46 IST
Last Updated 17 ಫೆಬ್ರುವರಿ 2024, 6:46 IST
ಅಕ್ಷರ ಗಾತ್ರ

ತುಮಕೂರು: ‘ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ₹100 ಕೋಟಿ ಅನುದಾನ ನೀಡಬೇಕು. ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸವಿತಾ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕಟ್‍ವೆಲ್‌ ರಂಗನಾಥ್‌ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಸವಿತಾ ಸಮಾಜದಿಂದ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮುದಾಯದ ಮುಖಂಡ ಸ್ವದೇಶಿ ವಿಶ್ವಣ, ‘ಸವಿತಾ ಸಮಾಜ ದೇಶದ ವಿವಿಧ ಭಾಗಗಳಲ್ಲಿ ಸುಮಾರು 27 ಹೆಸರುಗಳಿಂದ ಗುರುತಿಸಿಕೊಂಡಿದೆ. ಸಮಾಜದ ಬಗ್ಗೆ ಸ್ಕಂದ ಪುರಾಣದ ಕುಮಾರ ಪರ್ವದಲ್ಲಿ ದಾಖಲೆಯಿದೆ. ಐತಿಹಾಸಿಕ ಹಿನ್ನೆಲೆ ಇರುವ ಸಮಾಜದ ಜನರು ಕೀಳರಿಮೆ ಬಿಟ್ಟು ಹೊರ ಬರಬೇಕು’ ಎಂದು ಸಲಹೆ ಮಾಡಿದರು.

ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಮಂಜೇಶ್‌, ‘ಹಲವಾರು ದಾನಿಗಳ ಸಹಕಾರದಿಂದ ನಗರದಲ್ಲಿ ಉತ್ತಮವಾದ ಸವಿತಾ ಭವನ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅರ್ಥಪೂರ್ಣವಾಗಿ ಸವಿತಾ ಮಹರ್ಷಿ ಜಯಂತಿ ಆಚರಿಸಲಾಗುವುದು’ ಎಂದರು.

ಸಮಾಜದ ಮುಖಂಡರಾದ ಬಸವರಾಜು, ಟಿ.ಎಂ.ಶಾಂತಮೂರ್ತಿ, ಸಿ.ರಂಗನಾಥ್‌, ಚೈತನ್ಯಕುಮಾರಿ, ಕೆ.ಲೋಲಮ್ಮ ಇತರರನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್‌ ಸಿದ್ದೇಶ್‌, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಧನಿಯಕುಮಾರ್‌, ಸವಿತಾ ಸಮುದಾಯದ ಟಿ.ವಿ.ರಂಗನಾಥ್, ಕೆ.ವಿ.ನಾರಾಯಣಸ್ವಾಮಿ, ಎ.ಎಸ್.ಸುರೇಶ್‌, ವೇದಮೂರ್ತಿ, ಹನುಮಂತರಾಜು, ಪತ್ರಕರ್ತರಾದ ಚಿ.ನಿ.ಪುರುಷೋತ್ತಮ್, ಟಿ.ಎನ್.ಮಧುಕರ್‌ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT