ತಿಪಟೂರು: ನಗರದ ಕೆರೆಗೋಡಿ ರಸ್ತೆಯಲ್ಲಿರುವ ಸವಿತಾ ಸಮಾಜದ ಸಮುದಾಯ ಭವನದಲ್ಲಿ ಸವಿತಾ ಮಹರ್ಷಿಗಳ ಜಯಂತಿ, ತ್ಯಾಗರಾಜ ಸ್ವಾಮಿ ಆರಾಧನೆ, ಕರ್ಪೂರಿ ಠಾಕೂರ್ ಜನ್ಮದಿನಾಚರಣೆ ಹಾಗೂ ಅಭಿನಂದನಾ ಸಮಾರಂಭ ಮಂಗಳವಾರ ನಡೆಯಿತು.

ರಾಜ್ಯ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಎಂ.ಎಸ್.ಮುತ್ತುರಾಜು ಮಾತನಾಡಿ, ಸವಿತಾ ಸಮಾಜದವರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಒತ್ತು ನೀಡಬೇಕು. ಸಮಾಜದ ಬಂಧುಗಳು ಕುಲವೃತ್ತಿ ಜತೆಗೆ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಸಮಾಜದಲ್ಲಿ ಎಲ್ಲರಿಗೂ ನಾವು ಬೇಕಾಗಿದೆ. ಶಿಕ್ಷಣಕ್ಕಾಗಿ ಹೋರಾಟ ಮಾಡಿದರೆ ಮಾತ್ರ ಸಂಘಟನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಕೆಪಿಸಿಸಿ ಸದಸ್ಯ ವಿ.ಯೋಗೇಶ್ ಮಾತನಾಡಿ, ಸಣ್ಣಪುಟ್ಟ ಸಮಾಜದವರು ಸಂಘಟಿತರಾದರೆ ಮಾತ್ರ ಸರ್ಕಾರದ ಸವಲತ್ತು ಪಡೆಯಲು ಸಾಧ್ಯ ಎಂದು ಹೇಳಿದರು.

ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಮಂಜೇಶ್ ಗಾಂಧಿ ಮಾತನಾಡಿ, ಸಮಾಜದವರು ವೃತ್ತಿಯಲ್ಲಿ ಆಧುನಿಕತೆಗೆ ತಕ್ಕಂತೆ ಹೆಚ್ಚಿನ ತರಬೇತಿ ಪಡೆದು ಆರ್ಥಿಕವಾಗಿ ಸದೃಢರಾಗಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಸವಿತಾ ಯುವಪಡೆ ಅಧ್ಯಕ್ಷ ಕಟ್ವೆಲ್ ರಂಗನಾಥ್ ಮಾತನಾಡಿ, ಯುವಜನತೆ ಸಾಮಾಜಿಕ ಚಿಂತನೆಯೊಂದಿಗೆ ರಾಜಕೀಯವಾಗಿ ಮುಂದುವರೆಯಬೇಕು ಎಂದರು.

ಕುಪ್ಪಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪರಮೇಶ್ವರಯ್ಯ ಅವರನ್ನು ಸನ್ಮಾನಿಸಲಾಯಿತು. ತಾಲ್ಲೂಕು ಅಧ್ಯಕ್ಷ ಎ.ಲೋಕೇಶ್, ಬಿ.ಎಸ್. ಲಲಿತಮ್ಮ, ಟಿ.ಸಿ.ಗೋವಿಂದರಾಜು, ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಮುತ್ತುರಾಜು, ಜಿಲ್ಲಾ ಪ್ರತಿನಿಧಿ ಕೆ.ವಿ.ನಾರಾಯಣಸ್ವಾಮಿ, ಹರೀಶ್, ನಾಗೇಂದ್ರ, ಜಯರಾಮ್, ಲಕ್ಷ್ಮಿನಾರಾಯಣ, ವಿಜಯಕುಮಾರ್, ಟಿ.ಸಿ.ಗೋವಿಂದರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.