‘ಪರಿಶಿಷ್ಟ ನೌಕರರಿಗೆ ಅನ್ಯಾಯವಾಗಲು ಬಿಡುವುದಿಲ್ಲ’

7
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಭರವಸೆ

‘ಪರಿಶಿಷ್ಟ ನೌಕರರಿಗೆ ಅನ್ಯಾಯವಾಗಲು ಬಿಡುವುದಿಲ್ಲ’

Published:
Updated:
Deccan Herald

ತುಮಕೂರು: ‘ಬಡ್ತಿ ಮೀಸಲಾತಿ ವಿಷಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಅನ್ಯಾಯ ಆಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಭರವಸೆ ನೀಡಿದರು.

ನಗರದಲ್ಲಿ ಗುರುವಾರ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಜಿಲ್ಲೆಯ ಸಚಿವರು ಹಾಗೂ ಶಾಸಕರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

‘ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಅವರ ಜತೆ ಸುದೀರ್ಘವಾಗಿ ಸಮಾಲೋಚಿಸಲಾಗಿದೆ. ನಮ್ಮ ಸಮುದಾಯದವರಿಗೆ ಸಿಗಬೇಕಾದ ನ್ಯಾಯ ಸಿಗಲೇಬೇಕು. ಇದರಲ್ಲಿ ಯಾವುದೇ ಆಯ್ಕೆಗಳಿಲ್ಲ. ಆ ಕೆಲಸ ಆಗಿಯೇ ಆಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಎಸ್‌.ಸಿ, ಎಸ್‌.ಟಿ ನೌಕರರು ಆಂತಕ ಪಡುವ ಅಗತ್ಯವಿಲ್ಲ. ಸಮನ್ವಯ ಸಮಿತಿ ಇನ್ನಷ್ಟು ಸಂಘಟಿತವಾಗಬೇಕು. ಸಂಘಟನಾ ಶಕ್ತಿ ಪ್ರದರ್ಶನ ಆಗದಿದ್ದರೆ ಅನ್ಯಾಯ ಆಗುತ್ತಲೇ ಇರುತ್ತದೆ. ಹೀಗಾಗಿ ಸಂಘಟನೆ ಬಲಪಡಿಸಿ’ ಎಂದು ಸಮಿತಿ ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !