ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಳಿಯಾರು- ಕೆಂಕೆರೆ ಕಾಲೇಜು ಈಗ ಕರ್ನಾಟಕ ಪಬ್ಲಿಕ್ ಶಾಲೆ

ಪೂರ್ವ ಪ್ರಾಥಮಿಕ ಹಾಗೂ ಒಂದನೇ ತರಗತಿಗೆ ಪ್ರವೇಶ ಆರಂಭ
Last Updated 15 ಮೇ 2019, 12:45 IST
ಅಕ್ಷರ ಗಾತ್ರ

ಹುಳಿಯಾರು: ಇಲ್ಲಿನ ಹುಳಿಯಾರು- ಕೆಂಕೆರೆ ಪದವಿಪೂರ್ವ ಕಾಲೇಜು ಈಗ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮಾರ್ಪಾಡಾಗಿದ್ದು, ಪೂರ್ವ ಪ್ರಾಥಮಿಕ ಹಾಗೂ ಒಂದನೇ ತರಗತಿಗೆ ಪ್ರವೇಶ ಆರಂಭವಾಗಿದೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ಪ್ರಸಕ್ತ 2019- 20ನೇ ಶೈಕ್ಷಣಿಕ ಸಾಲಿಗೆ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಹಾಗೂ ಒಂದನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲಾಗುವುದು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

1ರಿಂದ 12ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಉಚಿತ ಶಿಕ್ಷಣ ದೊರೆಯಲಿದೆ. ರಾಜ್ಯ ಸರ್ಕಾರ ಒಂದರಿಂದ ಪದವಿಪೂರ್ವ ಹಂತದವರೆಗೆ ಒಂದೇ ಸೂರಿನಡಿ ಉಚಿತ ಶಿಕ್ಷಣ ನೀಡುವುದು ಕರ್ನಾಟಕ ಪಬ್ಲಿಕ್ ಶಾಲೆಯ ಉದ್ದೇಶವಾಗಿದೆ. ಶಾಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ಇಲ್ಲಿ ಉಚಿತವಾಗಿ ದೊರೆಯಲಿವೆ.

ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಶಿಕ್ಷಣ, ಉತ್ತಮ ಗ್ರಂಥಾಲಯ, ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಬಯೊಮೆಟ್ರಿಕ್, ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ (9ನೇ ತರಗತಿವರಗೆ ಮಾತ್ರ) ದೊರೆಯಲಿದೆ. ಅಂತೆಯೇ ಪದವಿಪೂರ್ವ ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ ಸೇರಿದಂತೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ದಸರಾ ಹಾಗೂ ಬೇಸಿಗೆ ಶಿಬಿರ ಆಯೋಜಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ ಹುಳಿಯಾರು ಪಟ್ಟಣದ ಎಂಪಿಎಸ್ ಶಾಲೆಯಲ್ಲಿ ತರಗತಿಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭವಾಗಲಿವೆ. ಹಂತ ಹಂತವಾಗಿ ಅಭಿವೃದ್ಧಿಗೊಂಡು ಎಲ್ಲ ತರಗತಿಗಳು ಪದವಿಪೂರ್ವ ಕಾಲೇಜು ಆವರಣದಲ್ಲಿ ಒಂದೇ ಸೂರಿನಡಿ ನಡೆಯಲಿವೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಹಾಗೂ ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಲಾಗುವುದು. ಹುಳಿಯಾರು ಸುತ್ತಮುತ್ತಲ ಎಲ್ಲ ಗ್ರಾಮಗಳ ಮಕ್ಕಳಿಗೂ ಪ್ರವೇಶದ ಅವಕಾಶವಿರುವುದರಿಂದ ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಹೆಚ್ಚಿನ ಮಾಹಿತಿಗೆ ಪ್ರಾಥಮಿಕ ಶಾಲಾ ವಿಭಾಗಕ್ಕೆ ವೈ.ಆರ್.ಅಂಬಿಕಾ (7899518093), ಪ್ರೌಢಶಾಲಾ ವಿಭಾಗಕ್ಕೆ ಡಿ.ಇಂದಿರಾ (9741260402), ಪದವಿಪೂರ್ವ ಕಾಲೇಜು ವಿಭಾಗಕ್ಕೆ ಪ್ರಸನ್ನಕುಮಾರ್ (9482679699) ಸಂಪರ್ಕಿಸಬಹುದು ಎಂದು ಅವರು ತಿಳಿಸಿರು.

ಉಪನ್ಯಾಸಕರಾದ ಎಚ್.ಎಸ್.ನಾರಾಯಣ್, ವಿ.ಎಚ್.ರೇವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT