ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ದತ್ತು: ದಾನಿಗಳ ನೆರವಿಗೆ ಚಿಂತನೆ

ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ.ಗೌಡ ಸೂಚನೆ
Last Updated 25 ನವೆಂಬರ್ 2020, 2:50 IST
ಅಕ್ಷರ ಗಾತ್ರ

ಶಿರಾ: ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳ ಅಭಿವೃದ್ಧಿಗೆ ಪೂರಕವಾಗಿ ಮೂಲ ಸೌಕರ್ಯ ಒದಗಿಸಲು ದಾನಿಗಳ ನೆರವು ಪಡೆ
ಯಿರಿ ಎಂದು ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ.ಗೌಡ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾ.ಪಂ ಅಧ್ಯಕ್ಷ ಚಂದ್ರಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಜನಪ್ರತಿನಿಧಿಗಳು ಶಾಲೆಗಳನ್ನು ದತ್ತು ಪಡೆಯಲು ಶಾಲೆಗಳ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.

ತಾಲ್ಲೂಕಿನ ಬಸವಹಳ್ಳಿ ಗ್ರಾಮದ ಶಾಲೆಗೆ 121 ಮಂದಿ ವಿದ್ಯಾರ್ಥಿಗಳು ಬರುತ್ತಿದ್ದರೂ ಇಲ್ಲಿ ಕುಡಿಯಲು ನೀರಿಲ್ಲ. ಶೌಚಾಲಯದ ವ್ಯವಸ್ಥೆ ಸರಿ ಇಲ್ಲ. ಇಂತಹ ಶಾಲೆಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಸಂಸದ ಎ‌.ನಾರಾಯಣಸ್ವಾಮಿ ಮಾತನಾಡಿ, ‘9 ತಿಂಗಳಿನಿಂದ ಶಾಲೆಗಳನ್ನು ಮುಚ್ಚಲಾಗಿದೆ. ಜನವರಿಯಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇರುವುದರಿಂದ ಎಲ್ಲ ಶಾಲೆಗಳ ಶೌಚಾಲಯಗಳನ್ನು ದುರಸ್ತಿ ಮಾಡಿಸಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಗೊಲ್ಲರಹಟ್ಟಿಗಳು ಮತ್ತು ಎಸ್.ಸಿ. ಕಾಲೊನಿಗಳಲ್ಲಿ ಚರಂಡಿ ರಸ್ತೆಗಳಿಲ್ಲದೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ಮಾಡಿ ನೀಡಿದರೆ ಜಿಲ್ಲಾ ಪಂಚಾಯಿತಿಯಿಂದ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಅನುಮೋದನೆ ಕೊಡಿಸಲಾಗುವುದು ಎಂದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಕಾನಿಂಗ್ ವೈದ್ಯರಿಲ್ಲದೆ ರೋಗಿಗಳು ಸಂಕಷ್ಟ ಪಡುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಈ ಬಗ್ಗೆ ಸೂಕ್ತಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪಶುವೈದ್ಯರು ಯಾರ ಕರೆಗಳನ್ನು ಸ್ವೀಕರಿಸುವುದಿಲ್ಲ ಎಂದು ಸದಸ್ಯರು ದೂರಿದಾಗ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಲಾಯಿತು.

ತೋಟಗಾರಿಕೆ ಇಲಾಖೆಯಲ್ಲಿ 817 ರೈತರಿಗೆ ₹18 ಕೋಟಿ ಬೆಳೆ ವಿಮೆ ಮಂಜೂರಾಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುಧಾಕರ್ ಹೇಳಿದರು.

ತಾ.ಪಂ ಉಪಾಧ್ಯಕ್ಷ ರಂಗನಾಥ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ತಿಮ್ಮಣ್ಣ, ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT