ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರಕ್ಕೆ ಸರ್ಕಾರದಿಂದ ಅಗತ್ಯ ನೆರವು

ಬೆಳಗುಂಬ ಬಳಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತರಬೇತಿ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ
Last Updated 30 ಅಕ್ಟೋಬರ್ 2019, 10:50 IST
ಅಕ್ಷರ ಗಾತ್ರ

ತುಮಕೂರು: ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಕ್ಕಳಿಗೆ ಅವಶ್ಯಕವಾಗಿದ್ದು ಈ ತರಬೇತಿ ಕೇಂದ್ರಕ್ಕೆ ಅಗತ್ಯ ನೆರವು ಕಲ್ಪಿಸಿಕೊಡಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ನಗರದ ಹೊರವಲಯದ ಬೆಳಗುಂಬ ಬಳಿಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತರಬೇತಿ ಕೇಂದ್ರ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರಿಗೆ ತಿಳಿಸಿದರು. ಮಾದರಿ ತರಬೇತಿ ಕೇಂದ್ರವನ್ನು ತ್ವರಿತವಾಗಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜತೆ ಮಾತನಾಡಿ ಅನುದಾನ ಬಿಡುಗಡೆ ಮಾಡಿಸುವೆ ಎಂದು ಭರವಸೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಮಾತನಾಡಿ, ‘ಸ್ಕೌಟ್ಸ್ ಗೈಡ್ಸ್ ಅವಶ್ಯಕವಿರುವ ಪಠ್ಯೇತರ ಚಟುವಟಿಕೆ, ಮಕ್ಕಳಲ್ಲಿ ಶಿಸ್ತು, ಪರಿಸರದ ಅರಿವು, ದೇಶಭಕ್ತಿಯನ್ನು ಮೂಡಿಸುವ ಸಂಸ್ಥೆ ಆಗಿದೆ. ಮಕ್ಕಳಿಗೆ, ಶಿಕ್ಷಕರಿಗೆ ಸ್ಕೌಟ್ಸ್ ವಿಚಾರ ತಿಳಿಯಬೇಕು’ ಎಂದರು.

7 ಲಕ್ಷ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿದ್ದಾರೆ. ಶನಿವಾರ ಬ್ಯಾಗ್ ಲೆಸ್ ಡೇ ಆಗಿದೆ. ಅಂದು ಈ ಚಟುವಟಿಕೆ ನಡೆಸಬೇಕು. ಮಕ್ಕಳಿಗೆ ಪ್ರಕೃತಿ ಅಧ್ಯಯನಕ್ಕೆ ಅಗತ್ಯವಾದ ಪರಿಸರ ಇಲ್ಲಿದೆ. ಬೆಂಗಳೂರಿನ ಸುತ್ತಮುತ್ತ ಇಂತಹ ಜಾಗವಿಲ್ಲ. ಆಗಾಗಿ ಈ ಕೇಂದ್ರವನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಮುಖ್ಯ ಆಯುಕ್ತೆ ಆಶಾ ಪ್ರಸನ್ನಮೂರ್ತಿ, ಸ್ಕೌಟ್ಸ್ ಸಂಸ್ಥೆಯ ಮಕ್ಕಳಿಗೆ ತರಬೇತಿಗೆ ಎರಡು ಎಕರೆ ಜಮೀನು ಮಂಜೂರಾಗಿದೆ. ಮಕ್ಕಳಿಗೆ ಅವಶ್ಯ ತರಬೇತಿ ನೀಡಲು ಸೌಲಭ್ಯ ಒದಗಿಸಲಾಗುವುದು. ಎಲ್ಲರ ಸಹಕಾರದಿಂದ ರಾಜ್ಯಕ್ಕೆ ಮಾದರಿಯಾದ ತರಬೇತಿ ಕೇಂದ್ರವನ್ನು ಮಾಡುವ ಉದ್ದೇಶ ಇದೆ ಎಂದು ಹೇಳಿದರು.

ಶಾಸಕ ಡಿ.ಸಿ.ಗೌರಿಶಂಕರ್, ಕಟ್ಟಡದ ಕೆಲಸವನ್ನು ಬೇಗ ಪೂರ್ಣಗೊಳಿಸಿ ಉದ್ಘಾಟನೆಗೊಳ್ಳುವಂತೆ ಮಾಡಲು ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಆಯುಕ್ತ ಬಿ.ಆರ್.ವೇಣುಗೋಪಾಲ್‌ಕೃಷ್ಣ, ಸುಭಾಷಿಣಿ, ಉಪಾಧ್ಯಕ್ಷ ಪ್ರಸನ್ನಕುಮಾರ್, ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್.ನಾಗಣ್ಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಡಿಡಿಪಿಐ ಲಲಿತಾಕುಮಾರಿ, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಷಾ, ತಾಲ್ಲೂಕು ಅಧ್ಯಕ್ಷ ಬೆಳ್ಳಿ ಲೋಕೇಶ್, ಖಜಾಂಚಿ ಕಿಶೋರ್, ತರಬೇತಿ ಆಯುಕ್ತೆ ಸಿಂದಗಿಕರ್, ನಂದಕುಮಾರ್, ಆಂಜಿನಪ್ಪ, ಕೆಂಪರಂಗಯ್ಯ, ಯತೀಶ್ ಕುಮಾರ್, ವೀರಭದ್ರಯ್ಯ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT